Skip to main content
*ಬೈರಾಗಿ' ಮೊದಲ ಹಾಡು ಬಿಡುಗಡೆ ಮಾಡಿದ 'ಭೀಮ'

*ಬೈರಾಗಿ' ಮೊದಲ ಹಾಡು ಬಿಡುಗಡೆ ಮಾಡಿದ 'ಭೀಮ'

*ಬೈರಾಗಿ' ಮೊದಲ ಹಾಡು ಬಿಡುಗಡೆ ಮಾಡಿದ 'ಭೀಮ'.

Kannada

*ಶಿವಣ್ಣನ ಎಂಟ್ರಿ ಸಾಂಗ್... ಅನೂಪ್ ಮ್ಯೂಸಿಕ್ ಬ್ಯಾಂಗ್ ಬ್ಯಾಂಗ್..!* ಶಿವರಾಜ್‌ಕುಮಾರ್ ನಟನೆಯ 123ನೇ ಸಿನಿಮಾ 'ಬೈರಾಗಿ' ಸದ್ಯ ಪೋಸ್ಟ್‌ ಪ್ರೊಡಕ್ಷನ್ ಹಂತದಲ್ಲಿದೆ.

ಶೀಘ್ರದಲ್ಲೇ ಬಿಡುಗಡೆಯಾಗಲಿರುವ ಈ ಚಿತ್ರದ ಮೊದಲ ಹಾಡನ್ನು ಸ್ಯಾಂಡಲ್'ವುಡ್ 'ಭೀಮ'ನಿಂದ ಅನಾವರಣಗೊಳಿಸಿದೆ ಚಿತ್ರತಂಡ. ಸಿನಿಮಾದಲ್ಲಿ ಈ ಹಾಡು ಶಿವಣ್ಣನ ಎಂಟ್ರಿ ಸಾಂಗ್ ಆಗಿದ್ದು ಸಖತ್ ಮಾಸ್ ಆಗಿ ಮೂಡಿಬಂದಿದೆ. ಡಾ. ವಿ.ನಾಗೇಂದ್ರ ಪ್ರಸಾದ್ ಸಾಹಿತ್ಯ, ಅನೂಪ್ ಸೀಳಿನ್ ಬ್ಯಾಂಡು ಬಜಾಯಿಸಿರುವ ಈ ಹಾಡಿಗೆ ಆ್ಯಂಥೋನಿ ದಾಸನ್ ದನಿಗೂಡಿಸಿದ್ದಾರೆ.

'ನಕ್ಕರನಖ ನಕ್ಕರನಖ ನುಗ್ಗಿಬಂತೋ ನಾಡಹುಲಿ...'* *'ಟಕರಟಕ ಟಕರಟಕ ಎಗರಿಬಂತೋ ಕಾಡಹುಲಿ...'* ಎಂಬ ಹಾಡು ಅಕ್ಷಯ ತೃತೀಯ ವಿಶೇಷ ದಿನದಂದು ವಿಜಯ್ ಕುಮಾರ್ ಬಿಡುಗಡೆ ಮಾಡಿ ಇಡೀ ಚಿತ್ರತಂಡಕ್ಕೆ ಶುಭ ಕೋರಿದ್ದಾರೆ. 'ಮಾಸ್ ಬೀಟ್, ಕೇಳಿದಾಕ್ಷಣ ಕುಣಿಸುವ ಸಂಗೀತ ಈ ಹಾಡಿನಲ್ಲಿದೆ. ಆ್ಯಂಥೋನಿ ದಾಸ್ ವಾಯ್ಸ್ ಕೇಳಿದಾಕ್ಷಣ ಥ್ರಿಲ್ ಆಗಿಹೋದೆ. ಶಿವಣ್ಣನ ಎನರ್ಜಿಗೆ ಸರಿದೂಗುವಂಥ ಹಾಡಿದು.

ನಾನಂತೂ ಸಖತ್ ಎಂಜಾಯ್ ಮಾಡಿದೆ. ಈ ಹಾಡನ್ನು ಕೇಳಿದವರೂ ಇಷ್ಟಪಡುತ್ತಾರೆ ಎಂಬ ಭರವಸೆಯಿದೆ' ಅನ್ನೋದು ವಿಜಿ ಮಾತು. 'ನೂರಾರು ಡಾನ್ಸರ್ಸ್, ಬೃಹತ್ ಸೆಟ್, ಕಲರ್'ಫುಲ್ ಕಾಸ್ಟ್ಯೂಮ್'ನಲ್ಲಿ ಶಿವಣ್ಣಈ ಹಾಡಿಗೆ ಭರ್ಜರಿ ಸ್ಟೆಪ್ಸ್ ಹಾಕಿದ್ದಾರೆ. ಬನೇರುಘಟ್ಟ ಸಮೀಪದ ದೇವಸ್ಥಾನವೊಂದರ ಬಳಿ ಜಾತ್ರೆ ಸೆಟ್ ಹಾಕಲಾಗಿತ್ತು. ದೊಡ್ಡ ಮಟ್ಟದಲ್ಲಿ ಈ ಹಾಡು ಮೂಡಿಬಂದಿದೆ' ಎನ್ನುತ್ತಾರೆ ನಿರ್ಮಾಪಕ ಕೃಷ್ಣ ಸಾರ್ಥಕ್. ವಿಜಯ್ ಮಿಲ್ಟನ್‌ ನಿರ್ದೇಶನ ಹಾಗೂ ಛಾಯಾಗ್ರಹಣವಿರುವ ಈ ಸಿನಿಮಾಕ್ಕೆ ಅವರೇ ಕಥೆ, ಚಿತ್ರಕಥೆ ಒದಗಿಸಿದ್ದಾರೆ. ಗುರು ಕಶ್ಯಪ್ ಸಂಭಾಷಣೆ ಈ ಚಿತ್ರಕ್ಕಿದೆ. ಕೃಷ್ಣ ಕ್ರಿಯೇಷನ್ಸ್ ಬ್ಯಾನರ್ ಅಡಿಯಲ್ಲಿ ಕೃಷ್ಣ ಸಾರ್ಥಕ್ 'ಬೈರಾಗಿ' ನಿರ್ಮಿಸಿದ್ದಾರೆ. ರಾಜ್ಯಾದ್ಯಂತ ಜಗದೀಶ್ ಗೌಡ ಈ ಸಿನಿಮಾವನ್ನು ವಿತರಣೆ ಮಾಡಲಿದ್ದಾರೆ.

Add new comment

Plain text

  • No HTML tags allowed.
  • Lines and paragraphs break automatically.
  • Web page addresses and email addresses turn into links automatically.