Skip to main content
ಏಪ್ರಿಲ್ ನಲ್ಲಿ "ತ್ರಿಕೋನ " ಚಿತ್ರ ತೆರೆಗೆ ಬರಲು ಸಿದ್ದ.

ಏಪ್ರಿಲ್ ನಲ್ಲಿ "ತ್ರಿಕೋನ " ಚಿತ್ರ ತೆರೆಗೆ ಬರಲು ಸಿದ್ದ.

ತ್ರಿಕೋನದಲ್ಲಿ ಮೂರು ತಲೆಮಾರಿನ ಕಥೆ.

Kannada new film

ಏಪ್ರಿಲ್ ನಲ್ಲಿ ಕನ್ನಡದ ತೆಲುಗು, ತಮಿಳಿನಲ್ಲಿಯೂ ಬಿಡುಗಡೆ* 65ರ ಇಳಿವಯಸ್ಸಿನ ಅನುಭವ, 45ರ ಹರೆಯದ ಅಹಂ, 25ರ ವಯಸ್ಸಿನ ಶಕ್ತಿ ಈ ಮೂರು ವಯಸ್ಸಿನ ಹಿನ್ನೆಲೆಯಲ್ಲಿ ಸಾಗುವ ಚಿತ್ರವೇ ತ್ರಿಕೋನ. ಈ ಹಿಂದೆ 2014ರಲ್ಲಿ 143 ಸಿನಿಮಾ ಮಾಡಿದ್ದ ಚಂದ್ರಕಾಂತ್ ಇದೀಗ ತ್ರಿಕೋನ ಚಿತ್ರಕ್ಕೆ ಆ್ಯಕ್ಷನ್ ಕಟ್ ಹೇಳುವ ಮೂಲಕ ಮತ್ತೆ ಬಂದಿದ್ದಾರೆ.

ಈ ಚಿತ್ರಕ್ಕೆ ರಾಜಶೇಖರ್ ಬಂಡವಾಳ ಹೂಡುವುದರ ಜತೆಗೆ ಚಿತ್ರಕ್ಕೆ ಕಥೆ ಸಹ ಬರೆದಿದ್ದಾರೆ. ಅಂದಹಾಗೆ‌ ಈ ಸಿನಿಮಾ ಏಪ್ರಿಲ್ ನಲ್ಲಿ ಬಿಡುಗಡೆ ಆಗಲಿದೆ.

Kannada film

ಮನುಷ್ಯ ಜೀವನದಲ್ಲಿ ತಾಳ್ಮೆ ಇದ್ರೆ ಏನೆಲ್ಲ ಸಂಪಾದನೆ ಮಾಡ್ತಾನೆ.. ತಾಳ್ಮೆ ಇಲ್ಲದಿದ್ದರೆ ಏನೆಲ್ಲ ಕಳೆದುಕೊಳ್ಳುತ್ತಾನೆ ಎಂಬುದೇ ಈ ಸಿನಿಮಾದಲ್ಲಿ ನಿರ್ದೇಶಕರು ಹೇಳಹೊರಟಿದ್ದಾರೆ. ಈಗಿನ ಪೀಳಿಗೆ ತಾಳ್ಮೆ ಇಲ್ಲದೆ ಸಾಕಷ್ಟು ಅನಾಹುತ ಮಾಡಿಕೊಳ್ಳುತ್ತಾರೆ. ಅದನ್ನು ಮನೆಯ ಇತರ ಸದಸ್ಯರಿಗೆ ನೀಡುತ್ತಾರೆ. ಇದಕ್ಕೆ ಸರಿಹೊಂದುವ ಮೂರು ತಲೆಮಾರುಗಳ ಮೂಲಕ ಅದನ್ನು ತೋರಿಸಲಿದ್ದೇವೆ ಎಂಬುದು ನಿರ್ದೇಶಕ ಚಂದ್ರಕಾಂತ್ ಮಾತು. ಬೆಂಗಳೂರು, ತುಮಕೂರು, ಹಾಸನ, ಸಕಲೇಶಪುರ, ಗುಂಡ್ಯ, ಸುಬ್ರಮಣ್ಯ, ಮಂಗಳೂರು, ಚಾರ್ಮಾಡಿ ಘಾಟ್, ಶಿರಾಡಿಘಾಟ್​ನಲ್ಲಿ ಸಿನಿಮಾ ಚಿತ್ರೀಕರಣವಾಗಿದೆ.

ವಿಶೇಷ ಏನೆಂದರೆ ಹೆಬ್ರಿ ಮತ್ತು ಆಗುಂಬೆ ಮಧ್ಯೆ ಕೂಡ್ಲು ತೀರ್ಥ ಫಾಲ್ಸ್​ನಲ್ಲಿ ಶೂಟಿಂಗ್ ಮಾಡಿಕೊಂಡ ಮೊದಲ ಸಿನಿಮಾ ಇದಾಗಿದೆ. ಇದೂ ಸಹ ಈ ಚಿತ್ರದ ವಿಶೇಷತೆಗಳಲ್ಲೊಂದು ಎನ್ನುತ್ತಾರೆ ಚಂದ್ರಕಾಂತ್. ಹಿರಿಯ ನಟಿ ಲಕ್ಷ್ಮೀ, ಸುರೇಶ್ ಹೆಬ್ಳಿಕರ್, ಅಚ್ಯುತ್ ಕುಮಾರ್, ಸಾಧು ಕೋಕಿಲ, ಸುಧಾರಾಣಿ, ಹೀಗೆ ಸಾಕಷ್ಟು ಕಲಾವಿದರು ಈ ಸಿನಿಮಾದಲ್ಲಿದ್ದಾರೆ. ರಾಜವೀರ್​ ಮತ್ತು ಮಾರುತೇಶ್ ಅನ್ನೋ ಹೊಸ ಪ್ರತಿಭೆಗಳನ್ನು ಈ ಸಿನಿಮಾ ಮೂಲಕ ಆಗಮಿಸುತ್ತಿದ್ದಾರೆ. ಶ್ರೀನಿವಾಸ್ ವಿನ್ನಕೋಟ್ ಛಾಯಾಗ್ರಹಣ, ಸುರೇಂದ್ರನಾಥ್ ಪಿ ಆರ್ ಸಂಗೀತದ ಜತೆಗೆ ಹಿನ್ನಲೆ ಸಂಗೀತವನ್ನೂ ನೀಡಿದ್ದಾರೆ. ಜೀವನ್ ಪ್ರಕಾಶ್​ ಎನ್ ಸಂಕಲನ.

Kannada new film

ಹೈಟ್ ಮಂಜು ಕೋರಿಯೋಗ್ರಾಫಿ, ಚೇತನ್ ಡಿಸೋಜ್ ಮತ್ತು ಜಾನಿ ಮಾಸ್ಟರ್​ ಸಾಹಸ ನಿರ್ದೇಶನ ಮಾಡಿದ್ದಾರೆ.

ಕನ್ನಡದಲ್ಲಿ ತ್ರಿಕೋನ, ತೆಲುಗಿನಲ್ಲಿ ತ್ರಿಕೋನಂ ಮತ್ತು ತಮಿಳಿನಲ್ಲಿ ಗೋಸುಲೋ ಶೀರ್ಷಿಕೆಯಲ್ಲಿ ಸಿನಿಮಾ ಏಕಕಾಲದಲ್ಲಿ ಬಿಡುಗಡೆ ಆಗಲಿದೆ. ಸೆನ್ಸಾರ್ ಮಂಡಳಿಯಿಂದಲೂ ಯಾವುದೇ ಕಟ್ ಇಲ್ಲದೆ ಯೂ/ಎ ಪ್ರಮಾಣಪತ್ರವನ್ನು ಪಡೆದುಕೊಂಡಿದೆ. ಚಿತ್ರದ ಡಿಯೋ ಹಕ್ಕುಗಳನ್ನು ಪೀಪಲ್ಸ್ ಸಂಸ್ಥೆ ಪಡೆದುಕೊಂಡಿದೆ.

Add new comment

Plain text

  • No HTML tags allowed.
  • Lines and paragraphs break automatically.
  • Web page addresses and email addresses turn into links automatically.