Skip to main content
ಎರಡನೇ ಸುತ್ತಿನ ಚಿತ್ರೀಕರಣ ಮುಗಿಸಿದ *ಅಮರ ಪ್ರೇಮಿ ಅರುಣ್*

ಎರಡನೇ ಸುತ್ತಿನ ಚಿತ್ರೀಕರಣ ಮುಗಿಸಿದ *ಅಮರ ಪ್ರೇಮಿ ಅರುಣ್*

ಎರಡನೇ ಸುತ್ತಿನ ಚಿತ್ರೀಕರಣ ಮುಗಿಸಿದ *ಅಮರ ಪ್ರೇಮಿ ಅರುಣ್*.

Kannada new film

ಒಲವು ಸಿನಿಮಾ ಸಂಸ್ಥೆಯು ನಿರ್ಮಿಸುತ್ತಿರುವ ʼಅಮರ ಪ್ರೇಮಿ ಅರುಣ್ʼ ಸಿನಿಮಾ, ತನ್ನ ಎರಡನೇ ಸುತ್ತಿನ ಚಿತ್ರೀಕರಣವನ್ನು ಬಳ್ಳಾರಿ ನಗರ ಮತ್ತು ಬಳ್ಳಾರಿ ತಾಲೂಕಿನ ಸಿರಿವಾರ ಗ್ರಾಮದಲ್ಲಿ ಮುಗಿಸಿದೆ. ಇದೀಗ ಮೂರನೇ ಸುತ್ತಿನ ಚಿತ್ರೀಕರಣಕ್ಕೆ ತಂಡ ತಯಾರಾಗುತ್ತಿದೆ.

ಬಳ್ಳಾರಿ ನಗರದ ಪ್ರಮುಖ ಜಾಗಗಳು ಮತ್ತು ಸಿರಿವಾರ ಗ್ರಾಮದಲ್ಲಿ ನಾಯಕ ಹರಿಶರ್ವಾ, ನಾಯಕಿ ದೀಪಿಕಾ ಆರಾಧ್ಯ ಸೇರಿದಂತೆ ಧರ್ಮಣ್ಣ, ಭೂಮಿಕಾ ಭಟ್, ಮಹೇಶ್ ಬಂಗ್, ರಾಧಾ ರಾಮಚಂದ್ರ, ಚೆನ್ನಬಸಪ್ಪ, ಸುನಂದಾ ಹೊಸಪೇಟೆ, ಬಲರಾಜ್ವಾಡಿ, ರೋಹಿಣಿ, ವಿಜಯಲಕ್ಷ್ಮಿ, ಮಂಡ್ಯ ಮಂಜು ಮತ್ತು ಅನೇಕ ಕಲಾವಿದರುಗಳ ನಟನೆಯಲ್ಲಿ ದೃಶ್ಯಗಳನ್ನು ಚಿತ್ರಿಸಲಾಗಿದೆ. ʼಅಮರ ಪ್ರೇಮಿ ಅರುಣ್ʼ ಸಿನಿಮಾ ವಿಶೇಷ ಪಾತ್ರಗಳಲ್ಲಿ ಕರ್ನಾಟಕ ಜಾನಪದ ಅಕಾಡೆಮಿ ಅಧ್ಯಕ್ಷರಾಗಿರುವ ಪದ್ಮಶ್ರೀ ಜೋಗತಿ ಮಂಜಮ್ಮನವರು ಮತ್ತು ಖ್ಯಾತ ರಂಗಕರ್ಮಿ ಹುಲಿಗೆಪ್ಪ ಕಟ್ಟಿಮನಿ ಅವರು ನಟಿಸಿದ್ದಾರೆ.

ʼಅಮರ ಪ್ರೇಮಿ ಅರುಣ್ʼ ಸಿನಿಮಾದ ಹಾಡುಗಳನ್ನು ಜಯಂತ ಕಾಯ್ಕಿಣಿಯವರು ಮತ್ತು ಯೋಗರಾಜ್ ಭಟ್ ಅವರುಗಳು ಬರೆದಿದ್ದಾರೆ. ಚಿತ್ರಕ್ಕೆ ಪ್ರವೀಣ್ ಕುಮಾರ್ ಜಿ ಅವರ ರಚನೆ-ನಿರ್ದೇಶನ, ಪ್ರವೀಣ್ ಎಸ್ ಅವರ ಛಾಯಾಗ್ರಹಣ, ಕಿರಣ್ ರವೀಂದ್ರನಾಥ್ ಅವರ ಸಂಗೀತ, ಮನು ಶೇಡ್ಗಾರ್ ಅವರ ಸಂಕಲನ, ಮಂಡ್ಯ ಮಂಜು ಅವರ ಕಾರ್ಯಕಾರಿ ನಿರ್ಮಾಣ ಮತ್ತು ಸುಧೀಂದ್ರ ವೆಂಕಟೇಶ್ ಅವರ ಮಾಧ್ಯಮ ಸಂಪರ್ಕವಿದೆ.

Add new comment

Plain text

  • No HTML tags allowed.
  • Lines and paragraphs break automatically.
  • Web page addresses and email addresses turn into links automatically.