Skip to main content
ಗೌರಿ-ಗಣೇಶ ಹಬ್ಬಕ್ಕೆ *ಬರ್ಕ್ಲಿ* ಚಿತ್ರದ ಲಿರಿಕಲ್ ಸಾಂಗ್ ಬಿಡುಗಡೆ.

ಗೌರಿ-ಗಣೇಶ ಹಬ್ಬಕ್ಕೆ *ಬರ್ಕ್ಲಿ* ಚಿತ್ರದ ಲಿರಿಕಲ್ ಸಾಂಗ್ ಬಿಡುಗಡೆ.

ಗೌರಿ-ಗಣೇಶ ಹಬ್ಬಕ್ಕೆ *ಬರ್ಕ್ಲಿ* ಚಿತ್ರದ ಲಿರಿಕಲ್ ಸಾಂಗ್ ಬಿಡುಗಡೆ.

Kannada new film

*ಸಂತೋಷ್ ಬಾಲರಾಜ್* ನಾಯಕನಾಗಿ ನಟಿಸಿರುವ ಈ‌ ಚಿತ್ರಕ್ಕೆ *ಸುಮಂತ್ ಕ್ರಾಂತಿ* ನಿರ್ದೇಶನ. ವಿಭಿನ್ನ ಕಥಾಹಂದರ ಹೊಂದಿರುವ *"ಬರ್ಕ್ಲಿ"* ಚಿತ್ರದ ಲಿರಿಕಲ್ ಸಾಂಗ್ ಗೌರಿ - ಗಣೇಶ ಹಬ್ಬದ ಶುಭ ಸಂದರ್ಭದಲ್ಲಿ ಜಂಕಾರ್ ಮ್ಯೂಸಿಕ್ ಮೂಲಕ ಬಿಡುಗಡೆಯಾಗಿದೆ.

ಬಹದ್ದೂರ್ ಚೇತನ್ ಅವರು ಬರೆದಿರುವ ಈ ಹಾಡನ್ನು ಸಂಜಿತ್ ಹೆಗ್ಡೆ ಸುಮಧುರವಾಗಿ ಹಾಡಿದ್ದಾರೆ. ಜ್ಯೂಡಾ ಸ್ಯಾಂಡಿ ಸಂಗೀತ ನೀಡಿದ್ದಾರೆ. ಸಂತೋಷ್ ಎಂಟರ್ ಪ್ರೈಸಸ್ ಲಾಂಛನದಲ್ಲಿ ಆನೇಕಲ್ ಬಾಲರಾಜ್ ಅವರು ನಿರ್ಮಿಸಿರುವ ಬರ್ಕ್ಲಿ ಚಿತ್ರದ ಪ್ರಥಮಪ್ರತಿ‌ ಸದ್ಯದಲ್ಲೇ ಸಿದ್ದವಾಗಲಿದೆ. . ಕರಿಯ, ಗಣಪ, ಕರಿಯ ೨ ಚಿತ್ರಗಳನ್ನು ನಿರ್ಮಿಸಿರುವ ಆನೇಕಲ್ ಬಾಲರಾಜ್ ಅವರ ನಿರ್ಮಾಣದ ಮತ್ತೊಂದು ಅದ್ದೂರಿ ಚಿತ್ರ "ಬರ್ಕ್ಲಿ‌".

ಉತ್ತಮ‌ ಮನೋರಂಜನೆಯ ಈ ಚಿತ್ರಕ್ಕೆ ಸುಮಂತ್ ಕ್ರಾಂತಿ ಕಥೆ, ಚಿತ್ರಕಥೆ ಹಾಗೂ ಸಂಭಾಷಣೆ ಬರೆದು ನಿರ್ದೇಶನ ಮಾಡಿದ್ದಾರೆ. ಗಣಪ, ಕರಿಯ ೨ ಚಿತ್ರಗಳಲ್ಲಿ ನಟಿಸಿ ಖ್ಯಾತಿಗಳಿಸಿರುವ ಸಂತೋಷ್ ಬಾಲರಾಜ್ ಈ ಚಿತ್ರದ ನಾಯಕರಾಗಿ ಅಭಿನಯಿಸಿದ್ದಾರೆ.

ಬಾಲ್ಯದಲ್ಲಿ ಕೇಂದ್ರ ಸರ್ಕಾರದ ನೋ ಸ್ಮೋಕಿಂಗ್ ಜಾಹೀರಾತಿನ ಮೂಲಕ ಬಾಲನಟಿಯಾಗಿ ಖ್ಯಾತರಾಗಿದ್ದ, ಸಿಮ್ರಾನ್ ನಾಟೇಕರ್ ಈ ಚಿತ್ರದ ನಾಯಕಿ. ಬಹುಭಾಷ ನಟ ಚರಣರಾಜ್, ಖ್ಯಾತ ನಟಿ ಶೃತಿ, ಬಲ ರಾಜವಾಡಿ , ಬುಲೆಟ್ ಪ್ರಕಾಶ್ ಮುಂತಾದವರ ತಾರಾಬಳಗ ಈ ಚಿತ್ರದಲ್ಲಿದೆ.

Add new comment

Plain text

  • No HTML tags allowed.
  • Lines and paragraphs break automatically.
  • Web page addresses and email addresses turn into links automatically.