ಜಿಲ್ಲಾಧಿಕಾರಿ ಆರ್.ವೆಂಕಟೇಶ್ ಕುಮಾರ್ ರವರಿಂದ ಚುನಾವಣಾ ಕಾರ್ಯಗಾರದಲ್ಲಿ ಕಾರ್ಯವಿಧಾನಗಳ ಬಗ್ಗೆ ಮಾಹಿತಿ.
ಜಿಲ್ಲಾಧಿಕಾರಿ ಆರ್.ವೆಂಕಟೇಶ್ ಕುಮಾರ್ ರವರಿಂದ ಚುನಾವಣಾ ಕಾರ್ಯಗಾರದಲ್ಲಿ ಕಾರ್ಯವಿಧಾನಗಳ ಬಗ್ಗೆ ಮಾಹಿತಿ.
ಚುನಾವಣಾ ಕಾರ್ಯಕ್ಕೆ ನೇಮಿಸಲಾಗಿರುವ ಅಧಿಕಾರಿಗಳು ಚುನಾವಣೆಗೆ ಸಂಬಂಧಿಸಿದ ಎಲ್ಲ ತಂಡಗಳ ಕಾರ್ಯವಿಧಾನವನ್ನು ತಿಳಿದುಕೊಳ್ಳಬೇಕು’ ಎಂದು ಜಿಲ್ಲಾಧಿಕಾರಿ ಆರ್.ವೆಂಕಟೇಶ್ ಕುಮಾರ್ ಹೇಳಿದರು. ನಗರದ ಡಾ.ಎಸ್.ಎಂ.ಪಂಡಿತ ರಂಗಮಂದಿರದಲ್ಲಿ ಚುನಾವಣೆಗೆ ನಿಯೋಜಿಸಿರುವ ಎಲ್ಲ ತಂಡಗಳ ತರಬೇತಿ ಕಾರ್ಯಾಗಾರದಲ್ಲಿ ಅವರು ಮಾತನಾಡಿದರು. ‘ಸೆಕ್ಟರ್ ಅಧಿಕಾರಿಗಳ ಕಾರ್ಯ ಚುನಾವಣಾ ನೀತಿ ಸಂಹಿತೆ ಜಾರಿಯಾಗುವ ಮುಂಚೆ ಸ್ವೀಪ್ ಕಾರ್ಯಕ್ರಮದಿಂದ ಪ್ರಾರಂಭವಾಗಿ ನೀತಿ ಸಂಹಿತೆ ಮುಕ್ತಾಯದವರೆಗೆ ಜಾರಿಯಲ್ಲಿರುತ್ತದೆ. ಸೆಕ್ಟರ್ ಅಧಿಕಾರಿಗಳಿಗೆ ಚುನಾವಣಾ ಸಂದರ್ಭದಲ್ಲಿ ವಿಶೇಷ ಕಾನೂನಾತ್ಮಕ ಅಧಿಕಾರವನ್ನು ನೀಡಲಾಗುತ್ತಿದೆ’ ಎಂದರು.
Recent comments