Skip to main content
ಪ್ರಿಯಾಂಕ ಉಪೇಂದ್ರ ಅಭಿನಯದ 1980 ಚಿತ್ರದ ಟ್ರೇಲರ್ ಬಿಡುಗಡೆ ಮಾಡಿ ಶುಭ ಕೋರಿದ ಅಭಿನಯ ಚಕ್ರವರ್ತಿ ಕಿಚ್ಚ ಸುದೀಪ.

ಪ್ರಿಯಾಂಕ ಉಪೇಂದ್ರ ಅಭಿನಯದ 1980 ಚಿತ್ರದ ಟ್ರೇಲರ್ ಬಿಡುಗಡೆ ಮಾಡಿ ಶುಭ ಕೋರಿದ ಅಭಿನಯ ಚಕ್ರವರ್ತಿ ಕಿಚ್ಚ ಸುದೀಪ.

ಪ್ರಿಯಾಂಕ ಉಪೇಂದ್ರ ಅಭಿನಯದ 1980 ಚಿತ್ರದ ಟ್ರೇಲರ್ ಬಿಡುಗಡೆ ಮಾಡಿ ಶುಭ ಕೋರಿದ ಅಭಿನಯ ಚಕ್ರವರ್ತಿ ಕಿಚ್ಚ ಸುದೀಪ.

Kannada new film

ವಿಭಿನ್ನ ಟ್ರೇಲರ್ ಗೆ ರಿಯಲ್ ಸ್ಟಾರ್ ಉಪೇಂದ್ರ ಮೆಚ್ಚುಗೆ. ಪ್ರಿಯಾಂಕ ಉಪೇಂದ್ರ ಅಭಿನಯದ 1980 ಚಿತ್ರದ ಟ್ರೇಲರ್ ಅಭಿನಯ ಚಕ್ರವರ್ತಿ ಕಿಚ್ಚ ಸುದೀಪ ಅವರಿಂದ ಬಿಡುಗಡೆಯಾಗಿದೆ. ಟ್ರೇಲರ್ ಬಿಡುಗಡೆ ಮಾಡಿದ್ದ ಸುದೀಪ್, ನಾನು ಎರಡು ವರ್ಷಗಳಿಂದ ದೊಡ್ಡ ಪರದೆಯ ಮೇಲೆ ಚಿತ್ರವನ್ನಾಗಲಿ, ಟ್ರೇಲರ್ ಆಗಲಿ ನೋಡಿಲ್ಲ.‌ ತುಂಬಾ ದಿನಗಳ ನಂತರ ಈ ಅವಕಾಶ ತಂದುಕೊಟ್ಟ ಚಿತ್ರತಂಡಕ್ಕೆ ಧನ್ಯವಾದ ಎಂದು ಹೇಳುತಾ,‌ಈ ಚಿತ್ರದ ಬಿಡುಗಡೆ ವೇಳೆಗೆ ಈಗಿರುವ ಸಂಕಷ್ಟದ ಪರಿಸ್ಥಿತಿ ದೂರವಾಗಿ, ಜನರಿಂದ ‌ಚಿತ್ರಮಂದಿರ ತುಂಬ ತುಳುಕುವಂತಾಗಲಿ ಎಂದು ಶುಭ ಕೋರಿದರು.

ವಿಭಿನ್ನ ಕಥೆಯಿಟ್ಟುಕೊಂಡು, ನಿರ್ದೇಶಕರು ಹೊಸತನ್ನು ಹೇಳ ಹೊರಟ್ಟಿದ್ದಾರೆ. ಚಿತ್ರ ನಮ್ಮ ಫ್ಲಿಕ್ಸ್ ನಲ್ಲಿ ಬಿಡುಗಡೆಯಾಗುತ್ತಿದೆ. ಎಲ್ಲರೂ ನೋಡಿ ಹರಸಿ ಎಂದರು ರಿಯಲ್ ಸ್ಟಾರ್ ಉಪೇಂದ್ರ. ಟ್ರೇಲರ್ ಬಿಡುಗಡೆ ಮಾಡಿಕೊಟ್ಟ ಸುದೀಪ್ ಹಾಗೂ ಉಪೇಂದ್ರ ಅವರಿಗೆ ಧನ್ಯವಾದ.ನಿರ್ದೇಶಕರು ಆಯ್ಕೆ ಮಾಡಿಕೊಂಡಿರುವ ಕಥೆ ತುಂಬಾ ಚೆನ್ನಾಗಿದೆ.

Kannada new film

 

ಪ್ಯಾರಲಲ್ ಯುನಿವರ್ಸಲ್ ನ ಈ ಕಥಾಹಂದರ ನೋಡುಗರ ಮನ ಗೆಲ್ಲಲಿದೆ. ಚಿತ್ರೀಕರಣದ ವೇಳೆ ಲಾಕ್ ಡೌನ್ ಮುಂತಾದ ಸಮಸ್ಯೆ ಎದುರಾದವು. ಇಲ್ಲದಿದ್ದರೆ ಕಳೆದ ಮೇನಲ್ಲಿ ಈ ಚಿತ್ರ ತೆರೆಗೆ ಬರಬೇಕಿತ್ತು. ಇದೇ ಅಕ್ಟೋಬರ್ ೧೫ ಚಿತ್ರ ನಮ್ಮ ಫ್ಲಿಕ್ಸ್ ನಲ್ಲಿ ಬಿಡುಗಡೆಯಾಗಲಿದೆ. ಎಲ್ಲರೂ ನೋಡಿ ಎಂದರು ಪ್ರಿಯಾಂಕ ಉಪೇಂದ್ರ.

ನನ್ನ ಈ ಕಥೆಗೆ ಕೆಲವು ಇಂಗ್ಲೀಷ್ ಸಿನಿಮಾಗಳು ಸ್ಪೂರ್ತಿ ಎನ್ನಬಹುದು. ಪ್ಯಾರಲಲ್ ಯುನಿವರ್ಸಲ್ ಕಥೆ ಆಧಾರಿತ ಚಿತ್ರ ನನಗೆ ತಿಳಿದ ಮಟ್ಟಿಗೆ ಇದೇ ಮೊದಲು ಎನ್ನಬಹುದು. ಚಿತ್ರ ಚೆನ್ನಾಗಿ ಮೂಡಿಬಂದಿದೆ ಎಂಬ ಭರವಸೆ ಇದೆ. ಎಲ್ಲರ ಹಾರೈಕೆ ಇರಲಿ ಎನ್ನುತ್ತಾರೆ ನಿರ್ದೇಶಕ ರಾಜ್ ಕಿರಣ್. ನಟ ನಿರಂಜನ್ ಸುಧೀಂದ್ರ, ನಿರ್ಮಾಪಕ ಜಾಕ್ ಮಂಜು, ನಮ್ಮ ಫ್ಲಿಕ್ಸ್ ನ ವಿಜಯ ಕುಮಾರ್ ಸಮಾರಂಭಕ್ಕೆ ಆಗಮಿಸಿ ಶುಭ ಕೋರಿದರು. ಈ ಚಿತ್ರವನ್ನು ಆರ್ ಕೆ ಪ್ರೊಡಕ್ಷನ್ಸ್ ಲಾಂಛನದಲ್ಲಿ ಪೂಜಾಶ್ರೀ ಹಾಗೂ ಸ್ವಾಮಿರಾಜ್ ನಿರ್ಮಿಸಿದ್ದಾರೆ. ಈ ಚಿತ್ರದ ಬಹುತೇಕ ಚಿತ್ರೀಕರಣ ಶನಿವಾರಸಂತೆಯ ಬಳಿ ನಡೆದಿದೆ. ರಾಜ್ ಕಿರಣ್ ಅವರೆ ಕಥೆ, ಚಿತ್ರಕಥೆ ಬರೆದಿದ್ದಾರೆ. ಪ್ರಿಯಾಂಕ ಉಪೇಂದ್ರ ಪ್ರಧಾನ ಪಾತ್ರದಲ್ಲಿ ನಟಿಸಿರುವ ಈ ಚಿತ್ರದ ಉಳಿದ ತಾರಾಬಳಗದಲ್ಲಿ ಅರವಿಂದ್ ರಾವ್, ಶ್ರೀಧರ್, ಮುರಳಿ ಶರ್ಮ ಮುಂತಾದವರಿದ್ದಾರೆ. ಚಿಂತನ್ ವಿಕಾಸ್ ಸಂಗೀತ ನಿರ್ದೇಶನ, ಜೀವನ್ ಅಂತೋಣಿ ಛಾಯಾಗ್ರಹಣ ಹಾಗೂ ಶ್ರೀಕಾಂತ್ ಅವರ ಸಂಕಲನ 1980 ಚಿತ್ರಕ್ಕಿದೆ.

Add new comment

Plain text

  • No HTML tags allowed.
  • Lines and paragraphs break automatically.
  • Web page addresses and email addresses turn into links automatically.