Skip to main content
ಶುಗರ್ ಫ್ಯಾಕ್ಟರಿ ಯಲ್ಲಿ ಬಾಬಾ ಸೆಹಗಲ್ ಹ್ಯಾಂಗೋವರ್ .

ಶುಗರ್ ಫ್ಯಾಕ್ಟರಿ ಯಲ್ಲಿ ಬಾಬಾ ಸೆಹಗಲ್ ಹ್ಯಾಂಗೋವರ್ .

ಶುಗರ್ ಫ್ಯಾಕ್ಟರಿ ಯಲ್ಲಿ ಬಾಬಾ ಸೆಹಗಲ್ ಹ್ಯಾಂಗೋವರ್ .

ಶುಗರ್ ಫ್ಯಾಕ್ಟರಿ ಯಲ್ಲಿ ಬಾಬಾ ಸೆಹಗಲ್ ಹ್ಯಾಂಗೋವರ್ .

ಡಾರ್ಲಿಂಗ್ ಕೃಷ್ಣ ನಾಯಕರಾಗಿ ನಟಿಸುತ್ತಿರುವ , ದೀಪಕ್ ಅರಸ್ ನಿರ್ದೇಶನದ "ಶುಗರ್ ಫ್ಯಾಕ್ಟರಿ" ಚಿತ್ರದ ಚಿತ್ರೀಕರಣ ಬಹುತೇಕ ಪೂರ್ಣವಾಗಿದೆ. ಸೆಪ್ಟೆಂಬರ್ 10 ಗಣೇಶ ಚತುರ್ಥಿ ಯ ಸಂಭ್ರಮ. ಆ ಶುಭದಿನದಂದು "ಶುಗರ್ ಫ್ಯಾಕ್ಟರಿ" ಚಿತ್ರದ ಲಿರಿಕಲ್ ಹಾಡು ಬಿಡುಗಡೆಯಾಗಲಿದೆ.

ಅದಕ್ಕೂ ಮುನ್ನ ಸಾಂಗ್ ಟೀಸರ್‌ ಬರಲಿದೆ. ಬಹದ್ದೂರ್ ಚೇತನ್ ಅವರು ಬರೆದಿರುವ ಈ ಹಾಡಿಗೆ ಖ್ಯಾತ ಗಾಯಕ ಬಾಬಾ ಸೆಹಗಲ್ ಧ್ವನಿಯಾಗಿದ್ದಾರೆ. ಕಫಿರ್ ರಫಿ ಸಂಗೀತ ನೀಡಿದ್ದಾರೆ. ಡಾರ್ಲಿಂಗ್ ಕೃಷ್ಣ ಅವರೊಡನೆ ಈ‌ ಹಾಡಿಗೆ ಸೋನಾಲ್ ಮಾಂಟೆರೊ ಹೆಜ್ಜೆ ಹಾಕಿದ್ದಾರೆ.

ಧನಂಜಯ್ ನೃತ್ಯ ನಿರ್ದೇಶನ ಮಾಡಿದ್ದಾರೆ. ಪ್ರವಾಸಿಗರ ಸ್ವರ್ಗ ಗೋವಾದಲ್ಲಿ ಈ ಹಾಡನ್ನು ಸುಂದರವಾಗಿ ಸೆರೆಹಿಡಿದಿದ್ದಾರೆ ಛಾಯಾಗ್ರಹಕ ಸಂತೋಷ್ ರೈ ಪಾತಾಜೆ. ಅದ್ದೂರಿಯಾಗಿ ಮೂಡಿಬಂದಿರುವ ಈ ಹಾಡಿಗೆ ಪ್ರೇಕ್ಷಕರ ಮನಸ್ಸಿಗೆ ಲಗ್ಗೆ ಹಾಕುವುದು ಖಚಿತ ಎನ್ನುತ್ತಾರೆ ನಿರ್ದೇಶಕರು. ಬಾಲಮಣಿ ಪ್ರೊಡಕ್ಷನ್ಸ್ ಲಾಂಛನದಲ್ಲಿ ಗಿರೀಶ್ . ಆರ್ ಈ ಚಿತ್ರವನ್ನು ನಿರ್ಮಿಸುತ್ತಿದ್ದಾರೆ.‌ ಡಾರ್ಲಿಂಗ್ ಕೃಷ್ಣ ಅವರಿಗೆ ನಾಯಕಿಯರಾಗಿ ಸೋನಾಲ್ ಮಾಂಟೆರೊ, ಅದ್ವಿತಿ ಶೆಟ್ಟಿ ಹಾಗೂ ಶಿಲ್ಪಾ ಶೆಟ್ಟಿ ಅಭಿನಯಿಸುತ್ತಿದ್ದಾರೆ.

Add new comment

Plain text

  • No HTML tags allowed.
  • Lines and paragraphs break automatically.
  • Web page addresses and email addresses turn into links automatically.