ಸ್ಯಾಂಡಲ್ ವುಡ್ ಯುವರಾಜ ನಿಖಿಲ್ ಕುಮಾರಗೆ ನಿಶ್ಚಿತಾರ್ಥ .
ಸ್ಯಾಂಡಲ್ ವುಡ್ ಯುವರಾಜ ನಿಖಿಲ್ ಕುಮಾರಸ್ವಾಮಿಗೆ ನಿಶ್ಚಿತಾರ್ಥ .
ಮಾಜಿ ಮುಖ್ಯಮಂತ್ರಿ ಎಚ್.ಡಿ.ಕುಮಾರಸ್ವಾಮಿ ಮತ್ತು ಶಾಸಕಿ ಅನಿತಾ ಕುಮಾರಸ್ವಾಮಿ ಪುತ್ರ, ನಟ ನಿಖಿಲ್ಕುಮಾರಸ್ವಾಮಿ ಅವರ ವಿವಾಹದ ನಿಶ್ಚಿತಾರ್ಥ ಇಂದು ಖಾಸಗಿ ಹೊಟೇಲ್ನಲ್ಲಿ ಅದ್ಧೂರಿಯಾಗಿ ನೆರವೇರಿತು. ಮಾಜಿ ಸಚಿವ ಎಂ.ಕೃಷ್ಣಪ್ಪ ಅವರ ಸಹೋದರನ ಮೊಮ್ಮಗಳಾದ ರೇವತಿ ಅವರೊಂದಿಗೆ ನಿಖಿಲ್ಕುಮಾರಸ್ವಾಮಿ ವಿವಾಹದ ನಿಶ್ಚಿತಾರ್ಥವು ಎರಡೂ ಕುಟುಂಬಗಳ ಬಂಧು-ಬಳಗ ಹಾಗೂ ಹಿರಿಯರ ಸಮ್ಮುಖದಲ್ಲಿ ನೆರವೇರಿತು.