"ಮಾಫಿಯಾ" ಚಿತ್ರಕ್ಕಾಗಿ ಎರಡು ವರ್ಷಗಳ ನಂತರ ಹೇರ್ ಕಟ್ ಮಾಡಿದ ಪ್ರಜ್ವಲ್ ದೇವರಾಜ್.*
"ಮಾಫಿಯಾ" ಚಿತ್ರಕ್ಕಾಗಿ ಎರಡು ವರ್ಷಗಳ ನಂತರ ಹೇರ್ ಕಟ್ ಮಾಡಿದ ಪ್ರಜ್ವಲ್ ದೇವರಾಜ್.
![Kannada new film](/sites/default/files/inline-images/IMG-20211130-WA0067.jpg)
ಪ್ರಜ್ವಲ್ ಅವರು ಕಳೆದ ಎರಡು ವರ್ಷಗಳಿಂದ ಹೇರ್ ಕಟ್ ಮಾಡಿಸಿರಲಿಲ್ಲ. ಡೈನಾಮಿಕ್ ಪ್ರಿನ್ಸ್ ಪ್ರಜ್ವಲ್ ದೇವರಾಜ್ ನಾಯಕನಾಗಿ ನಟಿಸುತ್ತಿರುವ 35 ನೇ ಚಿತ್ರ "ಮಾಫಿಯಾ" ಚಿತ್ರಕ್ಕಾಗಿ ಎರಡುವರ್ಷಗಳಿಂದ ದಟ್ಟವಾಗಿ ಬೆಳೆದಿದ್ದ ಕೂದಲನ್ನು ಕತ್ತರಿಸಿದ್ದಾರೆ.
ಆ ಕೂದಲನ್ನು ಕ್ಯಾನ್ಸರ್ ರೋಗದಿಂದ ಕೂದಲು ಕಳೆದುಕೊಂಡ ರೋಗಿಗಳಿಗೆ ದಾನ ಮಾಡಿ ಮಾನವೀಯತೆ ಮೆರೆದಿದ್ದಾರೆ. "ಮಮ್ಮಿ" ಮತ್ತು "ದೇವಕಿ"ಚಿತ್ರಗಳ ಮೂಲಕ ಜನಪ್ರಿಯರಾಗಿರುವ ಲೋಹಿತ್ ನಿರ್ದೇಶನದಲ್ಲಿ, ಪ್ರಜ್ವಲ್ ದೇವರಾಜ್ ನಾಯಕರಾಗಿ ನಟಿಸುತ್ತಿರುವ "ಮಾಫಿಯಾ" ಚಿತ್ರದ ಮುಹೂರ್ತ ಸಮಾರಂಭ ಡಿಸೆಂಬರ್ 2ರಂದು ನಡೆಯಲಿದೆ. ಚಿತ್ರೀಕರಣ ಡಿಸೆಂಬರ್ ಆರರಿಂದ ಆರಂಭವಾಗಲಿದೆ.
ಪ್ರಜ್ವಲ್ ಗೆ ನಾಯಕಿಯಾಗಿ ಅದಿತಿ ಪ್ರಭುದೇವ ನಟಿಸಲಿದ್ದಾರೆ. ಬೆಂಗಳೂರು ಕುಮಾರ್ ಫಿಲಂಸ್ ಲಾಂಛನದಲ್ಲಿ ಕುಮಾರ್.ಬಿ ಈ ಚಿತ್ರ ನಿರ್ಮಾಣ ಮಾಡುತ್ತಿದ್ದಾರೆ. ಅನೂಪ್ ಸೀಳಿನ್ ಸಂಗೀತ ನಿರ್ದೇಶನವಿರುವ ಈ ಚಿತ್ರಕ್ಕೆ ಮಾಸ್ತಿ ಸಂಭಾಷಣೆ ಬರೆಯುತ್ತಿದ್ದಾರೆ.ತರುಣ್ ಈ ಚಿತ್ರದ ಛಾಯಾಗ್ರಹಕರು.
Recent comments