Skip to main content
ಮತ್ತೊಂದು ಗರಿ! ಲಹರಿಯಿಂದ ಹೊರಬಂದ ರಿಕಿ ಕೇಜ್‌ ಆಲ್ಬಂ ಪ್ರತಿಷ್ಠಿತ ಗ್ರ್ಯಾಮಿ ಅವಾರ್ಡ್‌ಗೆ ನಾಮನಿರ್ದೇಶನ!!

ಮತ್ತೊಂದು ಗರಿ! ಲಹರಿಯಿಂದ ಹೊರಬಂದ ರಿಕಿ ಕೇಜ್‌ ಆಲ್ಬಂ ಪ್ರತಿಷ್ಠಿತ ಗ್ರ್ಯಾಮಿ ಅವಾರ್ಡ್‌ಗೆ ನಾಮನಿರ್ದೇಶನ!!

ಮತ್ತೊಂದು ಗರಿ! ಲಹರಿಯಿಂದ ಹೊರಬಂದ ರಿಕಿ ಕೇಜ್‌ ಆಲ್ಬಂ ಪ್ರತಿಷ್ಠಿತ ಗ್ರ್ಯಾಮಿ ಅವಾರ್ಡ್‌ಗೆ ನಾಮನಿರ್ದೇಶನ!! ಲಹರಿ

Kannada new film

ಮ್ಯೂಸಿಕ್‌ ಸಂಸ್ಥೆ ಕನ್ನಡ ಮಾತ್ರವಲ್ಲ, ಇಡೀ ಭಾರತೀಯ ಚಿತ್ರರಂಗಕ್ಕೆ ಹೆಮ್ಮೆ ಎನ್ನುವುದನ್ನು ಮತ್ತೊಮ್ಮೆ ಸಾಬೀತುಪಡಿಸಿದೆ. ಹೌದು, ಈಗಾಗಲೇ ದಕ್ಷಿಣ ಭಾರತದಲ್ಲಿ ಮೊದಲ ಸ್ಥಾನದಲ್ಲಿರುವ ಈ ಸಂಸ್ಥೆ, ಇದೀಗ ಮತ್ತೊಂದು ಸಂತೋಷದ ವಿಷಯಕ್ಕೆ ಕಾರಣವಾಗಿದೆ. ಇದೇ ಮೊದಲ ಬಾರಿಗೆ ಲಹರಿ ಮ್ಯೂಸಿಕ್‌ ಸಂಸ್ಥೆಯಿಂದ ಬಿಡುಗಡೆಯಾದ ಆಲ್ಬಂವೊಂದು ಗ್ರ್ಯಾಮಿ ಅವಾರ್ಡ್‌ಗೆ ನಾಮನಿರ್ದೇಶನಗೊಂಡಿದೆ. ಸಹಜವಾಗಿಯೇ ಲಹರಿ ಮ್ಯೂಸಿಕ್‌ ಸಂಸ್ಥೆಯ ಲಹರಿ ವೇಲು ಅವರಿಗೆ ಇದು ಖುಷಿಯಾಗಿದೆ. ಅಂದಹಾಗೆ, ಭಾರತೀಯ ಚಿತ್ರತಂಗದಲ್ಲೇ ಲಹರಿ ಮ್ಯೂಸಿಕ್‌ ಸಂಸ್ಥೆಯಿಂದ ಹೊರಬಂದಿರುವ ಈ ಆಲ್ಬಂ ಗ್ರ್ಯಾಮಿ ಪ್ರಶಸ್ತಿಗೆ ನಾಮನಿರ್ದೇಶನಗೊಂಡಿರುವುದಕ್ಕೆ ಮುಖ್ಯ ಕಾರಣ, ಅದು ಸಂಗೀತ ನಿರ್ದೇಶಕ, ಗಾಯಕ ರಿಕಿ ಕೇಜ್.‌ ರಿಕಿ ಕೇಜ್‌ ಅವರ "ಡಿವೈನ್‌ ಟೈಡ್ಸ್‌" ಹೆಸರಿನ ಆಲ್ಬಂ ಇದೀಗ ಗ್ರ್ಯಾಮಿ ಪ್ರಶಸ್ತಿಗೆ ನಾಮನಿರ್ದೇಶನಗೊಂಡಿದೆ. ಹಾಗೆ ನೋಡಿದರೆ, ರಿಕ್ಕಿ ಕೇಜ್‌ ಅವರಿಗೆ ಇದೇನು ಹೊಸದಲ್ಲ. ಕಳೆದ ಐದು ವರ್ಷಗಳ ಹಿಂದೆಯೇ ರಿಕಿ ಕೇಜ್‌ ಅವರು ಗ್ರ್ಯಾಮಿ ಅವಾರ್ಡ್‌ ಪಡೆದುಕೊಂಡಿದ್ದರು. ಈಗ ಎರಡನೇ ಬಾರಿಗೆ ಅವರು ಗ್ರ್ಯಾಮಿ ಪ್ರಶಸ್ತಿಗೆ ನಾಮನಿರ್ದೇಶನಗೊಂಡಿದ್ದಾರೆ. ವಿಶೇಷವೆಂದರೆ, ರಿಕಿ ಕೇಜ್‌ ಅವರ "ಡಿವೈನ್‌ ಟೈಡ್ಸ್"‌ ಆಲ್ಬಂ ಪ್ರಪಂಚದ ಅದ್ಭುತ ಆಲ್ಬಂಗಳ ಸಾಲಿಗೆ ಸೇರಿದ್ದು, ಪ್ರಪಂಚಾದ್ಯಂತ ಬಂದ ಆಲ್ಬಂಗಳನ್ನು ಹಿಂದಕ್ಕೆ ತಳ್ಳಿ ಪ್ರತಿಷ್ಠಿತ ಗ್ರ್ಯಾಮಿ ಪ್ರಶಸ್ತಿಗೆ ನಾಮನಿರ್ದೇಶನಗೊಂಡಿದೆ. ಸಹಜವಾಗಿಯೇ ಇದು ಕನ್ನಡಕ್ಕೆ ಹೆಮ್ಮೆಯ ವಿಷಯವೇ ಸರಿ. ಯಾಕೆಂದರೆ, ರಿಕಿ ಕೇಜ್‌ ಕೂಡ ಮೂಲತಃ ಕರ್ನಾಟಕದವರು. ಅದರಲ್ಲೂ ದಕ್ಷಿಣ ಭಾರತದಲ್ಲೇ ಪ್ರಖ್ಯಾತಿ ಪಡೆದಿರುವ ಲಹರಿ ಮ್ಯೂಸಿಕ್‌ ಸಂಸ್ಥೆಯಡಿ ಈಗಾಗಲೆ 1.26 ಲಕ್ಷ ಆಲ್ಬಂ ಹಾಡುಗಳಿವೆ. ಸೂಪರ್‌ ಹಿಟ್‌ ಹಾಡುಗಳನ್ನು ಕೊಟ್ಟಿರುವ ಲಹರಿ ಮ್ಯೂಸಿಕ್‌ ಸಂಸ್ಥೆ ಕನ್ನಡಿಗರ ಪ್ರೀತಿಗೆ ಪಾತ್ರವಾಗಿದೆ. ಈಗ ಇದೇ ಮೊದಲ ಸಲ "ಡಿವೈನ್‌ ಟೈಡ್ಸ್‌" ಆಲ್ಬಂ ಲಹರಿ ಸಂಸ್ಥೆಯಡಿ ಬಂದಿದ್ದು, ಆ ಆಲ್ಬಂ ಗ್ರ್ಯಾಮಿ ಅವಾರ್ಡ್‌ಗೆ ಹೋಗಿರೋದು ಸಂತಸದ ವಿಷಯ. ಭಾರತದಲ್ಲೇ ಮೊದಲ ಬಾರಿಗೆ ಲಹರಿ ಸಂಸ್ಥೆ ಗ್ರ್ಯಾಮಿ ಅವಾರ್ಡ್‌ಗೆ ನಾಮನಿರ್ದೇಶನಗೊಂಡಿರುವ ಬಗ್ಗೆ ಸ್ವತಃ ಲಹರಿ ಸಂಸ್ಥೆಯ ಮುಖ್ಯಸ್ಥ ವೇಲು ಅವರೇ ಸಂತೋಷಗೊಂಡಿದ್ದಾರೆ. ಅಂದಹಾಗೆ, 64 ನೇ ವಾರ್ಷಿಕ ಗ್ರ್ಯಾಮಿ ಅವಾರ್ಡ್‌ಗೆ "ಡಿವೈನ್ ಟೈಡ್ಸ್" ಎಂಬ ಅದ್ಭುತ ಆಲ್ಬಂ ನಾಮನಿರ್ದೇಶನಗೊಂಡಿದೆ. ಸ್ಟೀವರ್ಟ್ ಕೋಪ್ಲ್ಯಾಂಡ್ (ಪೊಲೀಸ್) ಮತ್ತು ರಿಕಿ ಕೇಜ್ 'ಡಿವೈನ್ ಟೈಡ್ಸ್' ಗಾಗಿ ಗ್ರ್ಯಾಮಿ ನಾಮನಿರ್ದೇಶನವನ್ನು ಪಡೆದುಕೊಂಡಿದ್ದಾರೆ. ಈ ನಾಮನಿರ್ದೇಶನದ ಕುರಿತಂತೆ ರೆಕಾರ್ಡಿಂಗ್ ಅಕಾಡೆಮಿಯ ಸಿಇಒ ಹಾರ್ವೆ ಮೇಸನ್ ಜೂನಿಯರ್ ಅವರು ಘೋಷಣೆ ಮಾಡಿದ್ದಾರೆ. ಕಳೆದ 2015ರಲ್ಲಿ ರಿಕಿ ಕೇಜ್ ಅವರ "ವಿಂಡ್ಸ್ ಆಫ್ ಸಂಸಾರ" ಎಂಬ ಆಲ್ಬಂಗೆ ಗ್ರ್ಯಾಮಿ ಪ್ರಶಸ್ತಿ ಲಭಿಸಿತ್ತು. ಮಹಾತ್ಮ ಗಾಂಧಿ ಮತ್ತು ನೆಲ್ಸನ್ ಮಂಡೇಲಾ ಅವರ ಆದರ್ಶಗಳನ್ನು ಆಧರಿಸಿ, 'ವಿಂಡ್ಸ್ ಆಫ್ ಸಂಸಾರ' ಆಲ್ಬಂ ಬಂದು ಅದು ಯಶಸ್ವಿಯಾಗಿತ್ತು.

ಇದರೊಂದಿಗೆ ಯುಎಸ್‌ನ ಬಿಲ್‌ಬೋರ್ಡ್ ನ್ಯೂ ಏಜ್ ಆಲ್ಬಮ್‌ಗಳ ಚಾರ್ಟ್‌ನಲ್ಲಿ ಮೊದಲ ಸ್ಥಾನದಲ್ಲಿತ್ತು. ಇದು ಭಾರತೀಯ ಮೂಲದ ವ್ಯಕ್ತಿಗೆ ಮೊದಲನೆ ಪ್ರಶಸ್ತಿ ಎಂಬುದು ವಿಶೇಷವಾಗಿತ್ತು. ರಿಕಿ ಗ್ರ್ಯಾಮಿ ಪ್ರಶಸ್ತಿ ಗೆದ್ದ ಭಾರತದ ಅತ್ಯಂತ ಕಿರಿಯ ವ್ಯಕ್ತಿ ಮತ್ತು 4 ನೇ ಭಾರತೀಯ. 5-ಬಾರಿ ಗ್ರ್ಯಾಮಿ ಪ್ರಶಸ್ತಿ ವಿಜೇತರಾಗಿರುವ ಸ್ಟೀವರ್ಟ್ ಕೋಪ್ಲ್ಯಾಂಡ್ ಅವರು ಪೌರಾಣಿಕ ಬ್ರಿಟಿಷ್ ರಾಕ್ ಗ್ರೂಪ್‌ನ 'ದಿ ಪೋಲಿಸ್' ಸ್ಥಾಪಕ ಮತ್ತು ಡ್ರಮ್ಮರ್ ಆಗಿದ್ದಾರೆ. ಪ್ರಪಂಚದಾದ್ಯಂತದ ಕಲಾವಿದರನ್ನು ಒಳಗೊಂಡಿರುವ ಪ್ರಸ್ತುತ ಗ್ರ್ಯಾಮಿ ನಾಮನಿರ್ದೇಶಿತ ಸಂಗೀತ ಆಲ್ಬಂ 'ಡಿವೈನ್ ಟೈಡ್ಸ್' ನಮ್ಮ ನೈಸರ್ಗಿಕ ಪ್ರಪಂಚದ ವೈಭವ ಮತ್ತು ಜಾತಿಗಳ ಸ್ಥಿತಿ ಸ್ಥಾಪಕತ್ವಕ್ಕೆ ಗೌರವವಾಗಿದೆ. ವಿಮರ್ಶಾತ್ಮಕವಾಗಿ ಮೆಚ್ಚುಗೆ ಪಡೆದ ಈ ಆಲ್ಬಂ 9 ಹಾಡುಗಳು ಮತ್ತು 8 ಸಂಗೀತ ವೀಡಿಯೊಗಳನ್ನು ಒಳಗೊಂಡಿದೆ, ಇದನ್ನು ಭಾರತೀಯ ಹಿಮಾಲಯದ ಸೊಗಸಾದ ಸೌಂದರ್ಯದಿಂದ ಸ್ಪೇನ್‌ನ ಹಿಮಾವೃತ ಕಾಡುಗಳವರೆಗೆ ವಿಶ್ವದಾದ್ಯಂತ ಚಿತ್ರೀಕರಿಸಲಾಗಿದೆ. 'ಡಿವೈನ್ ಟೈಡ್ಸ್' ಈಗಾಗಲೇ ಪ್ರಪಂಚದಾದ್ಯಂತದ ವಿವಿಧ ಉತ್ಸವಗಳಲ್ಲಿ ಹಲವಾರು ಪ್ರಶಸ್ತಿಗಳನ್ನು ಗೆದ್ದಿದೆ. ದಕ್ಷಿಣ ಭಾರತದ ಪ್ರಮುಖ ರೆಕಾರ್ಡ್ ಲೇಬಲ್ ಆದ ಲಹರಿ ಮ್ಯೂಸಿಕ್‌ನಿಂದ ಸಂಗೀತ ವೀಡಿಯೊಗಳನ್ನು ಪ್ರತ್ಯೇಕವಾಗಿ ಬಿಡುಗಡೆ ಮಾಡಲಾಗಿದೆ. 64 ನೇ ವಾರ್ಷಿಕ ಗ್ರ್ಯಾಮಿ ಪ್ರಶಸ್ತಿ ಸಮಾರಂಭ ಕ್ಯಾಲಿಫೋರ್ನಿಯಾದ ಲಾಸ್ ಏಂಜಲೀಸ್‌ನಲ್ಲಿ ಜನವರಿ 31, 2022 ರಂದು ನಡೆಯಲಿದೆ. ಈ ಸಮಾರಂಭದಲ್ಲಿ ವಿಜೇತರನ್ನು ಘೋಷಿಸಲಾಗುವುದು.

Add new comment

Plain text

  • No HTML tags allowed.
  • Lines and paragraphs break automatically.
  • Web page addresses and email addresses turn into links automatically.