ತವರು ಜಿಲ್ಲೆಯಲ್ಲಿಂದು ನಿಯೋಜಿತ ಮುಖ್ಯಮಂತ್ರಿ ಕುಮಾರಸ್ವಾಮಿ.
ತವರು ಜಿಲ್ಲೆಯಲ್ಲಿಂದು ನಿಯೋಜಿತ ಮುಖ್ಯಮಂತ್ರಿ ಕುಮಾರಸ್ವಾಮಿ.

ಕರುನಾಡಿನ ಕುಮಾರಣ್ಣ ರಾಜ್ಯದ ನಿಯೋಜಿತ ಮುಖ್ಯಮಂತ್ರಿ ಕುಮಾರ ಸ್ವಾಮಿಯವರು ಇಂದು ತಮ್ಮ ಹಾಸನ ಜಿಲ್ಲೆಯ ಹೊಳೆನರಸೀಪುರದ ಶ್ರೀಲಕ್ಷಿನರಸಿಂಹಸ್ವಾಮಿ ದೇವಾಲಯದಲ್ಲಿ ವಿಶೇಷ ಪೂಜೆ ಸಲ್ಲಿಸಿ.ಹುಟ್ಟೂರು ಹಾಗೂ ತಮ್ಮ ಬಾಲ್ಯ ಕಳೆದ ಊರಿನ 4 ದೇವಾಲಯಗಳಿಗೆ ಭೇಟಿ ನೀಡಿದ ಹೆಚ್ .ಡಿ. ಕುಮಾರ ಸ್ವಾಮಿಯವರು ಮಾಧ್ಯಮದ ಜೊತೆ ಮಾತನಾಡಿ ದೇವರ ಅನುಗ್ರಹ, ಹೆತ್ತವರ ಆಶೀರ್ವಾದ ದಿಂದ ನಾಡಿನ ಜನರ ಸೇವೆ ಮಾಡೋ ಅವಕಾಶ ಸಿಕ್ಕಿದೆ ನಾನು ಹುಟ್ಟಿ ಬೆಳೆದ ಲಕ್ಷ್ಮಿ ನರಸಿಂಹ ಸ್ವಾಮಿ, ಹರದನಹಳ್ಳಿ ಶಿವನ ಆಶೀರ್ವಾದ ಪಡೆಯಲು ಬಂದಿದ್ದೇನೆ.

ಮಧ್ಯಾಹ್ನ ದೆಹಲಿಗೆ ಹೋಗಿ ಸೋನಿಯಾಗಾಂಧಿ, ರಾಹುಲ್ ಗಾಂಧಿ, ಮಾಯಾವತಿ ಭೇಟಿ ಮಾಡುವೆ ನನಗೆ ಬೆಂಬಲ ನೀಡಿರುವ ಕಾಂಗ್ರೆಸ್ ನಾಯಕರೊಂದಿಗೆ ಚರ್ಚೆ ಮಾಡುವೆ ೫ ವರ್ಷ ಸುಭದ್ರ ಆಡಳಿತ ನೀಡಲು ಸಂಕಲ್ಪ ಮಾಡಿದ್ದೇನೆ ಇದಕ್ಕೆ ಎಲ್ಲರ ಸಹಕಾರ ಬೇಕಿದೆ ಈ ಬಾರಿ ಸಿಎಂ ಹುದ್ದೆ ನಿಭಾಯಿಸುವುದು ದೊಡ್ಡ ಸವಾಲು ಎಂಬುದು ನನಗೆ ಗೊತ್ತಿದೆ ಎಲ್ಲರ ಅಭಿಪ್ರಾಯಗಳನ್ನು ನಾನು ಗಮನಿಸುತ್ತಿದ್ದೆನೆ ಯಾರೂ ನನ್ನನ್ನು ನಿದ್ರೆಗೆಡಿಸಲು ಆಗಲ್ಲ,ಎಂದು ಮಾತನಾಡಿದರು.
Recent comments