ಅಕ್ಟೋಬರ್ ನಲ್ಲಿ ಗೋಲ್ಡನ್ ಸ್ಟಾರ್ ಗಣೇಶ್ 'ತ್ರಿಬಲ್ ರೈಡಿಂಗ್' ಶುರು.
ಅಕ್ಟೋಬರ್ ನಲ್ಲಿ ಗೋಲ್ಡನ್ ಸ್ಟಾರ್ ಗಣೇಶ್ 'ತ್ರಿಬಲ್ ರೈಡಿಂಗ್' ಶುರು.
ತಮ್ಮ ಅಮೋಘ ಅಭಿನಯದ ಮೂಲಕ ಜನಮನಸೂರೆಗೊಂಡಿರುವ ನಾಯಕ ಗೋಲ್ಡನ್ ಸ್ಟಾರ್ ಗಣೇಶ್. ಗಣೇಶ್ ನಾಯಕರಾಗಿ ಅಭಿನಯಿಸುತ್ತಿರುವ ನೂತನ ಚಿತ್ರ 'ತ್ರಿಬಲ್ ರೈಡಿಂಗ್'. ಈ ನೂತನ ಚಿತ್ರದ ಚಿತ್ರೀಕರಣ ಅಕ್ಟೋಬರ್ ಎರಡನೇ ವಾರದಲ್ಲಿ ಆರಂಭವಾಗಲಿದೆ. ಸದ್ಯ ಹೈದರಾಬಾದ್ ನಲ್ಲಿ ಹಾಡುಗಳ ಧ್ವನಿಮುದ್ರಣ ನಡೆಯುತ್ತಿದೆ. ಕಾಮಿಡಿ, ಪ್ರೇಮಕಥೆ, ಆಕ್ಷನ್ ಹಾಗೂ ಸಸ್ಪೆನ್ಸ್ ಥ್ರಿಲ್ಲರ್ ಕಥಾಹಂದರವಿರುವ ಈ ಚಿತ್ರವನ್ನು ಮಹೇಶ್ ಗೌಡ ನಿರ್ದೇಶಿಸುತ್ತಿದ್ದಾರೆ. ಈ ಹಿಂದೆ ವಿನೋದ್ ಪ್ರಭಾಕರ್ ಅಭಿನಯದ ರಗಡ್ ಚಿತ್ರವನ್ನು ನಿರ್ದೇಶಿಸಿದ್ದ, ಮಹೇಶ್ ಗೌಡ ಅವರಗೆ ಇದು ಎರಡನೇ ಚಿತ್ರ. ಯೋಗರಾಜ್ ಭಟ್ ನಿರ್ದೇಶನದ 'ಮುಂಗಾರು ಮಳೆ' ಚಿತ್ರಕ್ಕೆ ನಿರ್ದೇಶನ ವಿಭಾಗದಲ್ಲಿ ಕೆಲಸ ಮಾಡಿದ್ದ ಮಹೇಶ್ ಗೌಡ ಅವರಿಗೆ ಆಗಿನಿಂದಲೂ ಗಣೇಶ್ ಅವರಿಗೆ ಒಂದು ಚಿತ್ರ ನಿರ್ದೇಶಿಸುವ ಆಸೆ ಇತ್ತಂತೆ. ಅದು ಈಗ ಕೂಡಿ ಬಂದಿದೆ ಎನ್ನುತ್ತಾರೆ ಮಹೇಶ್ ಗೌಡ.
ಕೃಪಾಳು ಎಂಟರ್ ಟೈನ್ ಮೆಂಟ್ ಲಾಂಛನದಲ್ಲಿ ರಾಮ್ ಗೋಪಾಲ್ ವೈ ಎಂ ಈ ಚಿತ್ರ ನಿರ್ಮಿಸುತ್ತಿದ್ದಾರೆ. ಸಾಯಿಕಾರ್ತಿಕ್ ಸಂಗೀತ ನಿರ್ದೇಶನ, ಆನಂದ್ ಛಾಯಾಗ್ರಹಣ, ಕೆ.ಎಂ.ಪ್ರಕಾಶ್ ಸಂಕಲನ, ವಿಕ್ರಂ, ಡಿಫರೆಂಟ್ ಡ್ಯಾನಿ ಸಾಹಸ ನಿರ್ದೇಶನ ಹಾಗೂ ರಾಜು, ಭೂಷಣ್ ನೃತ್ಯ ನಿರ್ದೇಶನ ಈ ಚಿತ್ರಕ್ಕಿದೆ. ಜಯಂತ್ ಕಯ್ಕಿಣಿ, ಡಾ||ವಿ.ನಾಗೇಂದ್ರ ಪ್ರಸಾದ್, ಚೇತನ್ ಕುಮಾರ್, ಮಹೇಶ್ ಗೌಡ ಚಿತ್ರದ ಹಾಡುಗಳನ್ನು ರಚಿಸಿದರೆ, ರಾಜಶೇಖರ್, ಮಹೇಶ್ ಗೌಡ ಸಂಭಾಷಣೆ ಬರೆದಿದ್ದಾರೆ. ಗಣೇಶ್ ನಾಯಕರಾಗಿ ನಟಿಸುತ್ತಿರುವ ಈ ಚಿತ್ರದ ನಾಯಕಿಯ ಆಯ್ಕೆ ನಡೆಯುತ್ತಿದೆ. ಸಾಧುಕೋಕಿಲ, ರವಿಶಂಕರ್, ಕುರಿ ಪ್ರತಾಪ್ ಮುಂತಾದ ವರ ತಾರಾಬಳಗ 'ತ್ರಿಬಲ್ ರೈಡಿಂಗ್' ಚಿತ್ರದಲ್ಲಿರಲಿದೆ.
Recent comments