Skip to main content
ಸೆಪ್ಟೆಂಬರ್ ನಲ್ಲಿ "ಡಿಯರ್ ಸತ್ಯ" ನ ಆಗಮನ‌

ಸೆಪ್ಟೆಂಬರ್ ನಲ್ಲಿ "ಡಿಯರ್ ಸತ್ಯ" ನ ಆಗಮನ‌

ಸೆಪ್ಟೆಂಬರ್ ನಲ್ಲಿ "ಡಿಯರ್ ಸತ್ಯ" ನ ಆಗಮನ‌ ,

ಸೆಪ್ಟೆಂಬರ್ ನಲ್ಲಿ "ಡಿಯರ್ ಸತ್ಯ" ನ ಆಗಮನ‌

ನಾಯಕ ಆರ್ಯನ್ ಸಂತೋಷ್ ಹುಟ್ಟುಹಬ್ಬಕ್ಕೆ ಟ್ರೇಲರ್ ಬಿಡುಗಡೆ ಮಾಡಿದ ಚಿತ್ರತಂಡ. ಡೆಲಿವರಿ ಬಾಯ್ಸ್ ಲೋಕಾರ್ಪಣೆ ಮಾಡಿದರು "ಡಿಯರ್ ಸತ್ಯ" ಚಿತ್ರದ ಟ್ರೇಲರ್. ಆರ್ಯನ್ ಸಂತೋಷ್ ನಾಯಕನಾಗಿ ನಟಿಸಿರುವ "ಡಿಯರ್ ಸತ್ಯ" ಚಿತ್ರ ಸೆಪ್ಟೆಂಬರ್ ನಲ್ಲಿ ತೆರೆಗೆ ಬರಲಿದೆ. ಅದಕ್ಕೂ ಮುನ್ನ ಈ ಚಿತ್ರದ ಟ್ರೇಲರ್ ಬಿಡುಗಡೆಯಾಗಿದೆ. ನಾಯಕ ಆರ್ಯನ್ ಸಂತೋಷ್ ಹುಟ್ಟುಹಬ್ಬದ ದಿನವೇ ಈ ಟ್ರೇಲರ್ ಬಿಡುಗಡೆ ಮಾಡಿದೆ ಚಿತ್ರತಂಡ.

ವಿಕ್ಚರಿ ಸಿನಿಮಾಸ್ ನಲ್ಲಿ ಟ್ರೇಲರ್ ಬಿಡುಗಡೆ ಹಾಗೂ ಮಾಧ್ಯಮಗೋಷ್ಠಿ ನಡೆಯಿತು. ನಾನು ಚಿತ್ರರಂಗಕ್ಕೆ ಬಂದು ಹತ್ತುವರ್ಷವಾಗಿದೆ. ಕಲ್ಲರಳಿ ಹೂವಾಗಿ ಮೂಲಕ ಪೋಷಕ ಕಲಾವಿದನಾಗಿ ಚಿತ್ರರಂಗ ಪ್ರವೇಶಿಸಿದ ನಾನು, ನೂರುಜನ್ಮಕ್ಕು ಚಿತ್ರದಿಂದ ನಾಯಕನಾದೆ. ಈ ಚಿತ್ರದ ಕಥೆ ಹಿಡಿದು ಸಾಕಷ್ಟು ಜನರನ್ನು ಸಂಪರ್ಕಿಸಿದೆ. ಯಾರು ಮುಂದೆ ಬರಲಿಲ್ಲ. ದೇವರ ಹಾಗೆ ಗಣೇಶ್ ಪಾಪಣ್ಣ, ಯತೀಶ್ ವೆಂಕಟೇಶ್ (ರಾಕ್ ಲೈನ್), ಶ್ರೀನಿವಾಸ್ ಶ್ರೀಭಕ್ತ ಹಾಗೂ ಅಜಯ್ ಅಪರೂಪ ಅವರು ಬಂದು ಈ ಚಿತ್ರ ನಿರ್ಮಾಣಕ್ಕೆ ಮುಂದಾದರು. ನಾನು ಕೂಡ ಈ ಚಿತ್ರದ ನಿರ್ಮಾಪಕರಲ್ಲಿ ಒಬ್ಬ. ನಿರ್ದೇಶಕ ಶಿವಗಣೇಶ್ ಸೇರಿದಂತೆ ಎಲ್ಲಾ ತಂತ್ರಜ್ಞರ ಶ್ರಮದಿಂದ ಚಿತ್ರ ಉತ್ತಮವಾಗಿ ಮೂಡಿಬಂದಿದೆ. ಸದ್ಯದಲ್ಲೇ ಚಿತ್ರ ತೆರೆಗೆ ಬರಲಿದೆ. ನೋಡಿ ಹರಸಿ ಎಂದರು ಆರ್ಯನ್ ಸಂತೋಷ್. ನಾವು ನಾಲ್ಕು ಜನ ನಿರ್ಮಾಪಕರು ಸೇರಿ ಎರಡು ವರ್ಷಗಳ ಹಿಂದೆ ಭಿನ್ನ ಎಂಬ ಸಿನಿಮಾ ನಿರ್ಮಾಣ ಮಾಡಿದ್ದೆವು.

ಸೆಪ್ಟೆಂಬರ್ ನಲ್ಲಿ "ಡಿಯರ್ ಸತ್ಯ" ನ ಆಗಮನ‌

ಓಟಿಟಿಯಲ್ಲಿ ಬಿಡುಗಡೆಯಾದ ಪ್ರಥಮ ಕನ್ನಡ ಚಿತ್ರವದು. ಈಗ ಎರಡನೇ ಚಿತ್ರವಾಗಿ "ಡಿಯರ್ ಸತ್ಯ" ನಿರ್ಮಾಣ ಮಾಡಿದ್ದೇವೆ ಪರ್ಪಲ್ ರಾಕ್ ಎಂಟರ್ ಟೈನರ್ ಹಾಗೂ ವಿಂಟರ್ ಬ್ರಿಡ್ಜ್ ಸ್ಟುಡಿಯೋ ಮೂಲಕ .‌ ಆರ್ಯನ್ ಸಂತೋಷ್ ನನ್ನ ಸ್ನೇಹಿತ. ಅವರು ಹೇಳಿದ ಕಥೆ ಇಷ್ಟವಾಗಿ ನಿರ್ಮಾಣಕ್ಕೆ ಮುಂದಾದೆವು. ಸೆಪ್ಟೆಂಬರ್ ನಲ್ಲಿ ಚಿತ್ರಮಂದಿರಗಳಲ್ಲೇ ಬಿಡುಗಡೆ ಮಾಡುವ ಯೋಜನೆ ಹಾಕಿಕೊಳ್ಳುತ್ತಿದ್ದೇವೆ ಎಂದರು ನಿರ್ಮಾಪಕ ಗಣೇಶ್ ಪಾಪಣ್ಣ.

ಮತ್ತೊಬ್ಬ ನಿರ್ಮಾಪಕ ಶ್ರೀನಿವಾಸ ಶ್ರೀಭಕ್ತ ಕೂಡ ಸಿನಿಮಾ ನಿರ್ಮಾಣದ ಬಗ್ಗೆ ಮಾಹಿತಿ ‌ನೀಡಿದರು. ಜಿಗರ್ ಥಂಡ, ತ್ರಾಟಕ, ಆ ದೃಶ್ಯ ಚಿತ್ರಗಳ ನಂತರ ನಾನು ಕೌಟುಂಬಿಕ ಚಿತ್ರವೊಂದನ್ನು ನಿರ್ದೇಶಿಸಬೇಕೆಂದು ಕೊಂಡೆ. ಆ ಸಮಯದಲ್ಲಿ ಸಂತೋಷ್ ಭೇಟಿಯಾದರು.‌ ನಂತರ ಚಿತ್ರ ಆರಂಭ ವಾಯಿತು. ನಾಯಕಿ ಅರ್ಚನಾ ಕೊಟ್ಟಿಗೆ ಅವರ ಅಭಿನಯವೂ ಚೆನ್ನಾಗಿದೆ. ಸಂಗೀತ ನಿರ್ದೇಶಕ ಶ್ರೀಧರ್ ವಿ ಸಂಭ್ರಮ್ ಉತ್ತಮ ಹಾಡುಗಳನ್ನು ನೀಡಿದ್ದಾರೆ..

ಎಲ್ಲಾ‌ ತಂತ್ರಜ್ಞರು ಹಾಗೂ ಕಲಾವಿದರಿಗೆ ನನ್ನ ಧನ್ಯವಾದ ಎಂದರು ನಿರ್ದೇಶಕ ಶಿವಗಣೇಶ್. ಆಡಿಷನ್ ಮೂಲಕ ಆಯ್ಕೆಯಾದ ನಾಯಕಿ ಅರ್ಚನಾ ಕೊಟ್ಟಿಗೆ, ಕಲಾವಿದರಾದ ಬಾಲು, ಕಾರ್ತಿಕ್ ಸುಬ್ರಹ್ಮಣ್ಯ, ಫ್ಯಾಷನ್ ಡೈರೆಕ್ಟರ್ ಭಾರ್ಗವಿ ವಿಖ್ಯಾತಿ ಹಾಗೂ ಸಾಹಸ ನಿರ್ದೇಶಕ ಕುಂಗ್ಫು ಚಂದ್ರು ಮಾಧ್ಯಮದ ಮುಂದೆ ತಮ್ಮ ಅಭಿಪ್ರಾಯ ಹಂಚಿಕೊಂಡರು. ಈ ಚಿತ್ರದಲ್ಲಿ ನಾಯಕ ಡೆಲಿವರಿ ಬಾಯ್ ಪಾತ್ರದಲ್ಲಿ ಕಾಣಿಸಿಕೊಂಡಿದ್ದಾರೆ. ಹಾಗಾಗಿ ಚಿತ್ರದ ಟ್ರೇಲರ್ ಅನ್ನು ಬೆಂಗಳೂರಿನಲ್ಲಿ ಆಹಾರವನ್ನು ತಲುಪಿಸುವ ಡೆಲಿವರಿ ಬಾಯ್ಸ್ ಬಿಡುಗಡೆ ಮಾಡಿದ್ದು ವಿಶೇಷವಾಗಿತ್ತು. ಆರ್ಯನ್ ಸಂತೋಷ್ ಕೇಕ್ ಕತ್ತರಿಸಿ ತಮ್ಮ ಹುಟ್ಟುಹಬ್ಬ ಆಚರಿಸಿಕೊಂಡರು. ನಿರ್ಮಾಪಕರಾದ ಭಾ.ಮಾ.ಹರೀಶ್, ಭಾ.ಮಾ.ಗಿರೀಶ್ ಹಾಗೂ ಕರಿಸುಬ್ಬು ಅವರು ಟ್ರೇಲರ್ ಬಿಡುಗಡೆ ಸಮಾರಂಭಕ್ಕೆ ಆಗಮಿಸಿ ಶುಭ ಕೋರಿದರು.

Add new comment

Plain text

  • No HTML tags allowed.
  • Lines and paragraphs break automatically.
  • Web page addresses and email addresses turn into links automatically.