ಅಕ್ಟೋಬರ್ 18 ಕ್ಕೆ ಬರಲಿದೆ "ಕಡಲ ತೀರದ ಭಾರ್ಗವ" ಚಿತ್ರದ ಟೀಸರ್.*
*ಅಕ್ಟೋಬರ್ 18 ಕ್ಕೆ ಬರಲಿದೆ "ಕಡಲ ತೀರದ ಭಾರ್ಗವ" ಚಿತ್ರದ ಟೀಸರ್.

ವಿಭಿನ್ನ ಕಥಾಹಂದರ ಹೊಂದಿರುವ "ಕಡಲ ತೀರದ ಭಾರ್ಗವ" ಚಿತ್ರದ ಪ್ರಥಮಪ್ರತಿ ಸಿದ್ದವಾಗಿದ್ದು, ಸದ್ಯದಲ್ಲೇ ತೆರೆಗೆ ಬರಲಿದೆ. ಇದೇ ಹದಿನೆಂಟನೇ ತಾರೀಖು ಚಿತ್ರದ ಟೀಸರ್ ಬಿಡುಗಡೆಯಾಗಲಿದೆ. ಈ ಟೀಸರ್ ಮೂಲಕ ಟ್ರೇಲರ್ ಹಾಗೂ ಚಿತ್ರ ಬಿಡುಗಡೆ ಬಗ್ಗೆ ಮಾಹಿತಿ ನೀಡಲಾಗುವುವುದು. ಏವಕಲ ಸ್ಟುಡಿಯೋ ಲಾಂಛನದಲ್ಲಿ ಈ ಚಿತ್ರ ನಿರ್ಮಾಣವಾಗಿದೆ.
ವರುಣ್ ರಾಜು ಪಟೇಲ್ ಹಾಗೂ ಭರತ್ ಗೌಡ ಈ ಚಿತ್ರದ ನಿರ್ಮಾಪಕರು. ವಿಜಯಂ ವಜ್ರ ವೆಂಕ್ಚರ್ಸ್ ಸಹ ನಿರ್ಮಾಣ ಈ ಚಿತ್ರಕ್ಕಿದೆ. ನಿರ್ಮಾಪಕರಾದ ಭರತ್ ಗೌಡ ಹಾಗೂ ವರುಣ್ ರಾಜು ಪಟೇಲ್ ಈ ಚಿತ್ರದ ನಾಯಕರಾಗೂ ಅಭಿನಯಿಸಿದ್ದಾರೆ.
ಶೃತಿ ಪ್ರಕಾಶ್ ಈ ಚಿತ್ರದ ನಾಯಕಿ. ಈಟಿವಿ ಶ್ರೀಧರ್, ರಾಘವ್ ನಾಗ್ , ಅಶ್ವಿನ್ ಹಾಸನ್ ಮುಂತಾದವರು ಈ ಚಿತ್ರದ ತಾರಾಬಳಗದಲ್ಲಿದ್ದಾರೆ. ಬೆಂಗಳೂರು, ಉಡುಪಿ, ಮುರುಡೇಶ್ವರ ಹಾಗೂ ಇನ್ನಿತರ ಕರಾವಳಿಯ ಕಡಲತೀರಗಳಲ್ಲಿ ಈ ಚಿತ್ರದ ಚಿತ್ರೀಕರಣ ನಡೆದಿದೆ. ಪನ್ನಗ ಸೋಮಶೇಖರ್ ಕಥೆ, ಚಿತ್ರಕಥೆ ಹಾಗೂ ಸಂಭಾಷಣೆ ಬರೆದು ನಿರ್ದೇಶಿಸಿರುವ ಈ ಚಿತ್ರಕ್ಕೆ ಅನಿಲ್ ಸಿ ಜೆ ಸಂಗೀತ ನಿರ್ದೇಶನ, ಕೀರ್ತನ್ ಪೂಜಾರ್ ಛಾಯಾಗ್ರಹಣ ಹಾಗೂ ಆಶಿಕ್ ಕುಸುಗೊಳ್ಳಿ , ಉಮೇಶ್ ಭೋಸಗಿ ಅವರ ಸಂಕಲನವಿದೆ. ಇದು ಸಾಹಿತಿ ಶಿವರಾಮ ಕಾರಂತ ಅವರ ಜೀವನ ಕುರಿತಾದ ಚಿತ್ರವಲ್ಲ. ಕಡಲ ತೀರದಲ್ಲಿ ವಾಸಿಸುವ ನಾಯಕನ ಹೆಸರು ಭಾರ್ಗವ ಅಂತ. ಹಾಗಾಗಿ ಈ ಚಿತ್ರದ ಶೀರ್ಷಿಕೆ "ಕಡಲ ತೀರದ ಭಾರ್ಗವ" ಎಂದು ಚಿತ್ರತಂಡ ಸ್ಪಷ್ಟನೆ ನೀಡಿದೆ.
Recent comments