Skip to main content
ರಾಜ್ಯ ವಿಧಾನಸಭಾ ಚುನಾವಣೆಗೆ ದಿನಾಂಕ ಪ್ರಕಟ.

ರಾಜ್ಯ ವಿಧಾನಸಭಾ ಚುನಾವಣೆಗೆ ದಿನಾಂಕ ಪ್ರಕಟ.

ರಾಜ್ಯ ವಿಧಾನಸಭಾ ಚುನಾವಣೆಗೆ ದಿನಾಂಕ ಪ್ರಕಟ.

ನವದೆಹಲಿ:ರಾಜ್ಯ ವಿಧಾನಸಭಾ ಚುನಾವಣೆಗೆ ಕೇಂದ್ರ ಚುನಾವಣಾ ಆಯೋಗದಿಂದ ದಿನಾಂಕವನ್ನು ಪ್ರಕಟಿಸಲಾಗಿದೆ.ಮೇ12ರಂದು ಮತದಾನ ನಡೆಯಲಿದೆ.ಮೇ 28ಕ್ಕೆ 224 ಸದ್ಯಸರ ಪ್ರಸಕ್ತ ವಿಧಾನಸಭೆಯ ಅವಧಿ ಮುಕ್ತಾಯವಾಗಲಿದ್ದು,ಅಷ್ಟರೊಳಗೆ ಹೊಸ ಸರ್ಕಾರ ಅಧಿಕಾಕ್ಕೆ ಬರಲಿದೆ.ದೆಹಲಿಯಲ್ಲಿ ಕೇಂದ್ರ ಮುಖ್ಯ ಚುನಾವಣಾ ಆಯುಕ್ತ ಒ.ಪಿ.ರಾವತ್ ಚುನಾವಣೆ ದಿನಾಂಕವನ್ನು ಘೋಷಿಸಿದ್ದು,ಇದರ ಬೆನ್ನಲ್ಲೇ ನೀತಿ ಸಂಹಿತೆ ಜಾರಿಗೆ ಬಂದಿದೆ.ರಾಜ್ಯ ಚುನಾವಣ ಆಯೋಗ ಈಗಾಗಲೇ ಸಕಲ ತಯಾರಿಗಳನ್ನು ಮಾಡಿಕೊಂಡಿದೆ.ಮತಗಟ್ಟೆ ಸಿಬ್ಬಂದಿ,ಅಧಿಕಾರಿಗಳಿಗೆ ಕಾರ್ಯಾಗಾರ ನಡೆಸಲಾಗಿದೆ.ವಿಧಾನಸಭೆ ಕ್ಷೇತ್ರಗಳಿಗೆ ಚುನಾವಣಾಧಿಕಾರಿಗಳನ್ನು ನೇಮಿಸಲಾಗಿದೆ.ಇದರ ಎಲ್ಲ ಮಾಹಿತಿಯನ್ನು ಪಡೆದುಕೊಂಡ ಕೇಂದ್ರ ಚುನಾವಣಾ ಆಯೋಗ ಇಂದು ದಿನಾಂಕವನ್ನು ಪ್ರಕಟಿಸಿದೆ.

Add new comment

Plain text

  • No HTML tags allowed.
  • Lines and paragraphs break automatically.
  • Web page addresses and email addresses turn into links automatically.