Skip to main content
ಶಿಕ್ಷಕರ ಸಮಸ್ಯೆಗಳಿಗೆ ಸ್ಪಂದಿಸದೆ ಇದ್ದರೆ ಖುದ್ದು ನಾನೇ ಹೋರಾಟಕ್ಕೆ ಇಳಿಯುತ್ತೇನೆ ಎಚ್ಚರಿಕೆ .!! ಹೆಚ್ ಡಿ ದೇವೆಗೌಡರು

ಶಿಕ್ಷಕರ ಸಮಸ್ಯೆಗಳಿಗೆ ಸ್ಪಂದಿಸದೆ ಇದ್ದರೆ ಖುದ್ದು ನಾನೇ ಹೋರಾಟಕ್ಕೆ ಇಳಿಯುತ್ತೇನೆ ಎಚ್ಚರಿಕೆ .!!! .

ಶಿಕ್ಷಕರ ಸಮಸ್ಯೆಗಳ ಪರಿಹಾರಕ್ಕೆ ಒತ್ತಾಯಿಸಿ ಧರಣಿ ಕುಳಿತ ಮಾಜಿಪ್ರಧಾನಿ.

H d ದೇವೇಗೌಡರು

ಬೆಂಗಳೂರು:ಶಿಕ್ಷಕರ ಕ್ಷೇತ್ರದ ಸಮಸ್ಯೆಗಳ ಪರಿಹಾರಕ್ಕೆ ಒತ್ತಾಯಿಸಿ ಮಾಜಿ ಪ್ರಧಾನಿ ಹೆಚ್.ಡಿ.ದೇವೇಗೌಡ ಅವರು ಇಂದು ಬೆಂಗಳೂರಿನ ಮೌರ್ಯ ವೃತ್ತದ ಬಳಿ ವಿಧಾನ ಪರಿಷತ್ ಸದಸ್ಯರ ಜೊತೆ ಪ್ರತಿಭಟನೆಯಲ್ಲಿ ಪಾಲ್ಗೊಂಡು ಸುದ್ದಿಘೋಷ್ಠಿ ನಡೆಸಿದರು. ಈಗಾಗಲೇ ಕೋವಿಡ್ -19 ಸಮಸ್ಸೆಯಿಂದ ಖಾಸಗಿ ಶಿಕ್ಷಣ ಸಂಸ್ಥೆಗಳು ಆರ್ಥಿಕವಾಗಿ ತೊಂದರೆಗಳು ಅನುಭವಿಸಿಸುತ್ತಿದ್ದು ಅನುದಾನರಹಿತ ಶಿಕ್ಷಕರಿಗೆ ವಿಶೇಷ ಪ್ಯಾಕೇಜ್, ಸೇವಾಭದ್ರತೆ, ಬಾಕಿ ಆರ್ ಟಿ ಇ ಹಣ ಬಿಡುಗಡೆ, ಆರೋಗ್ಯ ವಿಮೆ ಸೇರಿದಂತೆ ಹಲವು ಬೇಡಿಕೆಗಳ ಈಡೇರಿಕೆಯನ್ನು ತಕ್ಷಣ ನೆರವಿವೆರಿಸಬೇಕೆಂದು ಸರ್ಕಾರವನ್ನು ಆಗ್ರಹಿಸುತ್ತ, ಖಾಸಗಿ ಶಾಲೆಗಳ ಶಿಕ್ಷಕರ ಸಹಾಯಕ್ಕೆ ಸರ್ಕಾರ ಕೂಡಲೇ ದಾವಿಸಬೇಕು,

ಈಗಾಗಲೇ ಈ ವಿಷಯವಾಗಿ ಸಿಎಂ ಯಡಿಯೂರಪ್ಪಗೆ ಪತ್ರ ಬರೆದಿದ್ದೇನೆ ಬೇಕಾದರೆ ಮತ್ತೊಂದು ಪತ್ರವನ್ನು ಸಿಎಂಗೆ ಬರೆದು ಒತ್ತಾಯಿಸುತ್ತೇನೆ ಜೊತಗೆ ಇಂತಹ ಸಮಯದಲ್ಲಿ ಸರ್ಕಾರ ಮಾನವೀಯತೆ ಪ್ರದರ್ಶನ ಮಾಡಬೇಕು, ಖಾಸಗಿ ಶಾಲಾ ಶಿಕ್ಷಕರಿಗೆ ವಿಶೇಷ ಪ್ಯಾಕೇಜ್ ಘೋಷಣೆ ಮಾಡಬೇಕು ಈ ವಿಚಾರವನ್ನು ನಾನು ಮುಂದಿನ ಸಂಸತ್ ಅಧಿವೇಶನಲ್ಲಿ ಕೇಂದ್ರ ಸರ್ಕಾರದ ಗಮನಕ್ಕೂ ತರುತ್ತೀನಿ,ಅವಶ್ಯ ಬಿದ್ದರೆ ಅಧಿವೇಶನದಲ್ಲಿ ಚರ್ಚೆಗು ತಂದು ಮಾತಾನಾಡುತ್ತೀನಿ ಎನ್ನುತ್ತಾ,

H d ದೇವೇಗೌಡರು

ರಾಷ್ಟ್ರೀಯ ಏಕರೂಪ ಶಿಕ್ಷಣ ನೀತಿಗೆ ನಮ್ಮ ವಿರೋಧವಿದೇ ಕೇಂದ್ರ ಸರ್ಕಾರ ಏಕರೂಪ ಶಿಕ್ಷಣ ಜಾರಿಗೆ ತರಲು ಹೊರಟಿದೆ, ಇದರಿಂದ ಅನೇಕ ಸಮಸ್ಯೆಗಳು ಎದುರಾಗುತ್ತವೆ,ಯಾರಿಗೂ ಇದರಿಂದ ಉಪಯೋಗವಾಗಲ್ಲ ನಾನು ಸಂಸತ್ ಅಧಿವೇಶನದಲ್ಲಿ ಈ ಬಗ್ಗೆ ಚರ್ಚೆ ಮಾಡುತ್ತೀನಿ, ಅಂಕಿ- ಅಂಶದ ಸಮೇತ ಈ ಬಗ್ಗೆ ಧ್ವನಿ ಎತ್ತುತ್ತೇನೆ .ಅಲ್ಲದೇ ಶಿಕ್ಷಕರ ಸಮಸ್ಯೆ ಪರಿಹಾರ ಮಾಡದೇ ಹೋದರೆ ಖುದ್ದು ಹೋರಾಟಕ್ಕೆ ಇಳಿಯುತ್ತೀನಿ,ಇದು ಮೊದಲ ಹಂತದ ಹೋರಾಟ ಅಷ್ಟೇ ಸರ್ಕಾರಗಳು ಸ್ಪಂದಿಸದೇ ಹೋದರೆ ಮತ್ತೆ ಉಗ್ರವಾದ ಹೋರಾಟ ಮಾಡುತ್ತೇವೆ ಎಂದು ಸರ್ಕಾರಕ್ಕೆ ಖಡಕ್ ಎಚ್ಚರಿಕೆ ನೀಡಿದ್ದಾರೆ .

ಪ್ರತಿಭಟನೆಯಲ್ಲಿ ಶಿಕ್ಷಕ ಕ್ಷೇತ್ರದ ವಿಧಾನ ಪರಿಷತ್ ಸದಸ್ಯರು, ಶಿಕ್ಷಣ ಸಂಘಟನೆ ಗಳ ಪದಾದಿಕಾರಿಗಳು ಪ್ರತಿಭಟನೆಯಲ್ಲಿ ಭಾಗಿಯಾಗಿದ್ದರು ಜೊತೆಗೆ ಜೆಡಿಎಸ್ ರಾಜ್ಯಾಧ್ಯಕ್ಷರಾದ ಎಚ್ ಕೆ ಕುಮಾರಸ್ವಾಮಿ, ಪರಿಷತ್ ಸದಸ್ಯ ರಾದ ಚೌಡರೆಡ್ಡಿ ತೂಪಲ್ಲಿ, ಬೋಜೇಗೌಡ, ಎಚ್,ಎಂ, ರಮೇಶ್ ಗೌಡ ,ಕೆ ಟಿ ಶ್ರೀಕಂಠೇಗೌಡ,ತಿಪ್ಪೇಸ್ವಾಮಿ, ಮಾಜಿ ಪರಿಷತ್ ಸದಸ್ಯ ಟಿ ಎ ಶರವಣ ಪ್ರತಿಭಟನೆ ಯಲ್ಲಿ ಭಾಗಿಯಾಗಿದ್ದರು

Add new comment

Plain text

  • No HTML tags allowed.
  • Lines and paragraphs break automatically.
  • Web page addresses and email addresses turn into links automatically.