Skip to main content
ಸಂದೇಶ್ ಪ್ರೊಡಕ್ಷನ್ಸ್ ಸಂಸ್ಥೆಯಿಂದ ಪ್ಯಾನ್ ಇಂಡಿಯಾ ಸಿನಿಮಾ

ಸಂದೇಶ್ ಪ್ರೊಡಕ್ಷನ್ಸ್ ಸಂಸ್ಥೆಯಿಂದ ಪ್ಯಾನ್ ಇಂಡಿಯಾ ಸಿನಿಮಾ

ಸಂದೇಶ್ ಪ್ರೊಡಕ್ಷನ್ಸ್ ಸಂಸ್ಥೆಯಿಂದ ಪ್ಯಾನ್ ಇಂಡಿಯಾ ಸಿನಿಮಾ.

Kannada

ಖ್ಯಾತ ಬಹುಭಾಷಾ ನಟ ಪ್ರಭುದೇವ ನಟನೆ.

ಸಂದೇಶ್ ಪ್ರೊಡಕ್ಷನ್ಸ್ ಲಾಂಛನದಲ್ಲಿ ರಾಷ್ಟ್ರ ಪ್ರಶಸ್ತಿ ವಿಜೇತ ನಿರ್ಮಾಪಕ ಸಂದೇಶ್ ನಾಗರಾಜ್ ಅವರು ಈ ತನಕ‌ ನಿರ್ಮಾಣ ಮಾಡಿರುವ ಚಿತ್ರಗಳು ಸಾಕಷ್ಟು ಹೆಸರು‌ ಮಾಡಿದೆ. ಈಗ ಈ‌ ಪ್ರತಿಷ್ಠಿತ ಸಂಸ್ಥೆಯ ಮೂಲಕ ಪ್ಯಾನ್ ಇಂಡಿಯಾ ಸಿನಿಮಾವೊಂದು ನಿರ್ಮಾಣವಾಗಲಿದೆ.

ಕನ್ನಡ, ತೆಲುಗು, ತಮಿಳು, ಮಲೆಯಾಳಂ ಹಾಗೂ ಹಿಂದಿ ಭಾಷೆಗಳಲ್ಲಿ ಈ ಚಿತ್ರ ಬರಲಿದೆ. ಖ್ಯಾತ ಬಹುಭಾಷಾ ನಟ ಹಾಗೂ ತಮ್ಮ ಅಮೋಘ ನೃತ್ಯದ ಮೂಲಕ ವಿಶ್ವದಾದ್ಯಂತ ಹೆಸರು ಮಾಡಿರುವ ಪ್ರಭುದೇವ ಈ ಚಿತ್ರದಲ್ಲಿ ಅಭಿನಯಿಸುತ್ತಿದ್ದಾರೆ. ಸದ್ಯದಲ್ಲೇ ಈ ಚಿತ್ರದ ತಾರಾಬಳಗ ‌ಹಾಗೂ ತಾಂತ್ರಿಕವರ್ಗದ ಮಾಹಿತಿ ನೀಡುವುದಾಗಿ ಸಂದೇಶ್ ನಾಗರಾಜ್ ತಿಳಿಸಿದ್ದಾರೆ.

Add new comment

Plain text

  • No HTML tags allowed.
  • Lines and paragraphs break automatically.
  • Web page addresses and email addresses turn into links automatically.