ಸಂದೇಶ್ ಪ್ರೊಡಕ್ಷನ್ಸ್ ಸಂಸ್ಥೆಯಿಂದ ಪ್ಯಾನ್ ಇಂಡಿಯಾ ಸಿನಿಮಾ
ಸಂದೇಶ್ ಪ್ರೊಡಕ್ಷನ್ಸ್ ಸಂಸ್ಥೆಯಿಂದ ಪ್ಯಾನ್ ಇಂಡಿಯಾ ಸಿನಿಮಾ.
ಖ್ಯಾತ ಬಹುಭಾಷಾ ನಟ ಪ್ರಭುದೇವ ನಟನೆ.
ಸಂದೇಶ್ ಪ್ರೊಡಕ್ಷನ್ಸ್ ಲಾಂಛನದಲ್ಲಿ ರಾಷ್ಟ್ರ ಪ್ರಶಸ್ತಿ ವಿಜೇತ ನಿರ್ಮಾಪಕ ಸಂದೇಶ್ ನಾಗರಾಜ್ ಅವರು ಈ ತನಕ ನಿರ್ಮಾಣ ಮಾಡಿರುವ ಚಿತ್ರಗಳು ಸಾಕಷ್ಟು ಹೆಸರು ಮಾಡಿದೆ. ಈಗ ಈ ಪ್ರತಿಷ್ಠಿತ ಸಂಸ್ಥೆಯ ಮೂಲಕ ಪ್ಯಾನ್ ಇಂಡಿಯಾ ಸಿನಿಮಾವೊಂದು ನಿರ್ಮಾಣವಾಗಲಿದೆ.
ಕನ್ನಡ, ತೆಲುಗು, ತಮಿಳು, ಮಲೆಯಾಳಂ ಹಾಗೂ ಹಿಂದಿ ಭಾಷೆಗಳಲ್ಲಿ ಈ ಚಿತ್ರ ಬರಲಿದೆ. ಖ್ಯಾತ ಬಹುಭಾಷಾ ನಟ ಹಾಗೂ ತಮ್ಮ ಅಮೋಘ ನೃತ್ಯದ ಮೂಲಕ ವಿಶ್ವದಾದ್ಯಂತ ಹೆಸರು ಮಾಡಿರುವ ಪ್ರಭುದೇವ ಈ ಚಿತ್ರದಲ್ಲಿ ಅಭಿನಯಿಸುತ್ತಿದ್ದಾರೆ. ಸದ್ಯದಲ್ಲೇ ಈ ಚಿತ್ರದ ತಾರಾಬಳಗ ಹಾಗೂ ತಾಂತ್ರಿಕವರ್ಗದ ಮಾಹಿತಿ ನೀಡುವುದಾಗಿ ಸಂದೇಶ್ ನಾಗರಾಜ್ ತಿಳಿಸಿದ್ದಾರೆ.
Recent comments