Skip to main content
"ತನುಜಾ" ಸಿನಿಮಾ ಕಥೆಗೆ ಮನಸೋತು ಬಣ್ಣ ಹಚ್ಚಿದ ಮಾಜಿ ಮುಖ್ಯಮಂತ್ರಿ "ಬಿ.ಎಸ್ ಯಡಿಯೂರಪ್ಪ"

"ತನುಜಾ" ಸಿನಿಮಾ ಕಥೆಗೆ ಮನಸೋತು ಬಣ್ಣ ಹಚ್ಚಿದ ಮಾಜಿ ಮುಖ್ಯಮಂತ್ರಿ "ಬಿ.ಎಸ್ ಯಡಿಯೂರಪ್ಪ"

"ತನುಜಾ" ಸಿನಿಮಾ ಕಥೆಗೆ ಮನಸೋತು ಬಣ್ಣ ಹಚ್ಚಿದ ಮಾಜಿ ಮುಖ್ಯಮಂತ್ರಿ "ಬಿ.ಎಸ್ ಯಡಿಯೂರಪ್ಪ".

Kannada

ಮಾಜಿ ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಅವರು ತನುಜಾ ಚಿತ್ರಕ್ಕೆ ಮೊಟ್ಟಮೊದಲ ಬಾರಿಗೆ ಬಣ್ಣ ಹಚ್ಚಿ ಸ್ಯಾಂಡಲ್ವುಡ್ಗೆ ಪಾದಾರ್ಪಣೆ ಮಾಡಿದ್ದಾರೆ. ಈ ಹಿಂದೆ ಅವರೇ ಮುಖ್ಯಮಂತ್ರಿಗಳಾಗಿದ್ದ ಸಂದರ್ಭದಲ್ಲಿ ತನುಜಾ ಎಂಬ ಹೆಣ್ಣುಮಗಳು ಕೋವಿಡ್ ಕಾರಣದಿಂದ ನೀಟ್ ಪರೀಕ್ಷೆ ಬರೆಯಲಾಗದೆ ತನ್ನ ಅಸಹಾಯಕತೆಯನ್ನು ತೋಡಿಕೊಂಡಿದ್ದ ಸಂದರ್ಭದಲ್ಲಿ ಪತ್ರಕರ್ತ ವಿಶ್ವೇಶ್ವರ ಭಟ್ ಹಾಗೂ ಪ್ರದೀಪ್ ಈಶ್ವರ್ ಅವರ ಸಹಕಾರದಿಂದ ಪರೀಕ್ಷೆ ಬರೆದು ನೀಟ್ ಪಾಸಾಗಿದ್ದು ಇಡೀ ದೇಶದ ಗಮನ ಸೆಳೆದಿತ್ತು.

Kannada

ಪರೀಕ್ಷೆ ಬರೆಯಲು ಸುಮಾರು 350ಕಿಮೀ ದೂರ ಪ್ರಯಾಣ ಮಾಡಿ ಬಂದು ಪರೀಕ್ಷೆ ಬರೆದಿದ್ದೆ ರೋಚಕತೆಯಿಂದ ಕೂಡಿದ್ದು ಎಲ್ಲರ ಕುತೂಹಲ ಕೆರಳಿಸಿತು ಇದನ್ನೇ ಒನ್ಲೈನ್ ಸ್ಟೋರಿ ಆಗಿಸಿಕೊಂಡು ಸಾಮಾಜಿಕ ಕಳಕಳಿಯುಳ್ಳ ರಾಜ್ಯಪ್ರಶಸ್ತಿ ವಿಜೇತ ಹರೀಶ್ ಎಂ.ಡಿ ಹಳ್ಳಿಯವರು ಚಿತ್ರ ನಿರ್ದೇಶನ ಮಾಡುತ್ತಿದ್ದಾರೆ.

ಇದೀಗ ಮಾಜಿ ಸಿಎಂ ಆಗಮನದಿಂದ ಚಿತ್ರತಂಡಕ್ಕೆ ದೊಡ್ಡ ಗೆಲುವಾಗಿದ್ದು ಖುದ್ದು ಅಂದಿನ ಮುಖ್ಯಮಂತ್ರಿಗಳಾಗಿದ್ದ ಯಡಿಯೂರಪ್ಪನವರು ಇಂದು ಅವರ ಪಾತ್ರಕ್ಕೆ ಬಣ್ಣಹಚ್ಚಿದ್ದು ಸ್ಯಾಂಡಲ್ ವುಡ್ ನಲ್ಲಿ ಸಂಚಲನ ಮೂಡಿಸುತ್ತಿದೆ. ಇಂದು ಮೊದಲ ದಿನ ಅವರ ಭಾಗದ ಚಿತ್ರೀಕರಣ ಯಶಸ್ವಿಯಾಗಿ ನಡೆದಿದ್ದು ಅತ್ಯದ್ಭುತವಾಗಿ ನಟಿಸಿದ್ದಾರೆ ಎಂದು ಚಿತ್ರತಂಡ ಹೇಳಿಕೊಂಡಿದೆ. ಯಡಿಯೂರಪ್ಪನವರನ್ನು ವಿಧಾನಸೌಧದ ಒಳಗೆ ಮತ್ತು ಹೊರಗೆ ಹೋರಾಟದ ಮುಖವನ್ನ ಕಂಡಿರುವ ಪಕ್ಷದ ಕಾರ್ಯಕರ್ತರು, ಅಭಿಮಾನಿಗಳು ಅವರು ಚಿತ್ರದಲ್ಲಿ ಹೇಗೆ ಕಾಣಿಸುತ್ತಾರೋ..? ಅವರ ಪಾತ್ರ ಹೇಗಿರಲಿದೆ.? ಎನ್ನುವ ಸಹಜ ಕುತೂಹಲ ಎಲ್ಲರಲ್ಲಿದೆ. ಇದಕ್ಕೆಲ್ಲ ಉತ್ತರವಾಗಿ ಸದ್ಯದಲ್ಲೇ ಚಿತ್ರ ತೆರೆಕಾಣುತ್ತಿದೆ.

Beyond visions cinemas ಲಾಂಛನದಲ್ಲಿ ನಿರ್ಮಾಣವಾಗುತ್ತಿರುವ "ತನುಜಾ" ಚಿತ್ರ ನೈಜ ಘಟನೆಯಾಧಾರಿತ ವಾಗಿದ್ದು ಶಿವಮೊಗ್ಗದ ಹಾಗೂ ಬೆಂಗಳೂರಿನ ಹಲವೆಡೆ ಚಿತ್ರೀಕರಣಗೊಂಡಿದೆ.

ಸರ್ಕಾರಿ ಹಿ.ಪ್ರಾಥಮಿಕ ಶಾಲೆ ಕಾಸರಗೋಡು ಚಿತ್ರದಲ್ಲಿ ಅಭಿನಯಿಸಿದ್ದ ಸಪ್ತ‌ ಪಾವೂರು ಈ ಚಿತ್ರದ ಮುಖ್ಯಪಾತ್ರದಲ್ಲಿ ಅಭಿನಯಿಸುತ್ತಿದ್ದು ತಾರಾಗಣದಲ್ಲಿ ಬಿ.ಎಸ್ ಯಡಿಯೂರಪ್ಪ, ವಿಶ್ವೇಶ್ವರಯ್ಯ ಭಟ್, ಡಾ.ಕೆ ಸುಧಾಕರ್, ರಾಜೇಶ್ ನಟರಂಗ, ಕೈಲಾಶ್, ಸಂಧ್ಯಾ ಅರಕೆರೆ, ಬೇಬಿ ಶ್ರೀ, ಅಭಿನಯಿಸುತ್ತಿದ್ದು ಪ್ರದ್ಯೋತನ ಸಂಗೀತ ನಿರ್ದೇಶನ ಹಾಗೂ ರವೀಂದ್ರನಾಥ್ ಅವರ ಛಾಯಾಗ್ರಹಣ, ಉಮೇಶ್ ಆರ್.ಬಿ ಸಂಕಲನವಿದ್ದು ಆರ್ ಚಂದ್ರಶೇಖರ್ ಪ್ರಸಾದ್ ಹಾಗೂ ಜೆ.ಎಂ ಪ್ರಹ್ಲಾದ್ ಸಂಭಾಷಣೆ ಬರೆದಿದ್ದು ನಿರ್ದೇಶಕ ಹರೀಶ್ ಎಂ.ಡಿ ಹಳ್ಳಿ ನಿರ್ದೇಶನದ ಜವಾಬ್ದಾರಿ ಹೊತ್ತಿದ್ದಾರೆ.

Add new comment

Plain text

  • No HTML tags allowed.
  • Lines and paragraphs break automatically.
  • Web page addresses and email addresses turn into links automatically.